Connect with us

    KARNATAKA

    ಬೆಂಗಳೂರು : ನಿರ್ಮಾಣ ಹಂತದ ಕಟ್ಟಡ ಕುಸಿತ, 5 ಮೃತ್ಯು, ಹಲವರು ಗಂಭೀರ, ಕಳಪೆ ಕಾಮಗಾರಿ ದುರ್ಘಟನೆಗೆ ಕಾರಣ..!!

    ಬೆಂಗಳೂರು :  ನಿರ್ಮಾಣ ಹಂತದ ಕಟ್ಟಡ ಕುಸಿದು ಐದು ಜನ ಮೃತಪಟ್ಟಿದ್ದು ಅನೇಕರು ಗಂಭಿರ ಗಾಯಗೊಂಡ ಘಟನೆ ಬೆಂಗಳೂರು ನಗರದ ಹೆಣ್ಣೂರಿನ ಬಾಬುಸಾಬ್ ಪಾಳ್ಯದಲ್ಲಿ ನಡೆದಿದೆ.

     

    ನಿರ್ಮಾಣಹಂತದ ಕಟ್ಟಡದಲ್ಲಿ ಬಿಹಾರ ಮತ್ತು ಉತ್ತರ ಕರ್ನಾಟಕ ಮೂಲದ 21ಮಂದಿ ಕಾರ್ಮಿಕರು ಕೆಲಸ ಮಾಡುತ್ತಿದ್ದರು. ಆದ್ರೆ ಭಾರಿ ಮಳೆ ಹೊಡೆತಕ್ಕೆ, ಕಳಪೆ ಕಾಮಗಾರಿಯಿಂದ ಕೂಡಿದ್ದ ಕಟ್ಟಡ ಮಂಗಳವಾರ ಸಂಜೆ ಸಂಜೆ ಏಕಾಏಕಿ  ಕುಸಿದುಬಿದ್ದಿದೆ.ರಾತ್ರಿ ಇಡೀ ಅವಶೇಷಗಳಡಿ ಸಿಲುಕಿದವರ ಪತ್ತೆಕಾರ್ಯ ಮುಂದುವೆರೆದಿತ್ತು. ಮೃತದೇಹಗಳನ್ನು ಹೊರ ತೆಗೆಯಲು ಜೆಸಿಬಿ, ಹಿಟಾಚಿಗಳ ಮೂಲಕ ಕುಸಿದ ಕಟ್ಟಡದ ಅವಶೇಷಗಳನ್ನು ತೆರವು ಮಾಡುವ ಕಾರ್ಯಾಚರಣೆ ನಡೆಯುತ್ತಿದೆ. ಕಾಮಗಾರಿಯ ವೇಳೆಗೆ 16 ಕಾರ್ಮಿಕರು ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ. ಕೂಲಿ ಕಾರ್ಮಿಕರು ಕಟ್ಟಡದ ಅವಶೇಷಗಳಲ್ಲಿ ಸಿಲುಕಿದ್ದು ಸ್ಥಳಕ್ಕೆ ರಕ್ಷಣಾ ಕಾರ್ಯಾಚರಣೆ ತಂಡ ಭೇಟಿ ನೀಡಿ ಅವಶೇಷಗಳನ್ನು ತೆಗೆಯುವ ಕೆಲಸ ನಡೆಸುತ್ತಿದ್ದಾರೆ. 6 ಮಂದಿ ಕಾರ್ಮಿಕರಿಗೆ ತೀವ್ರ ಗಾಯಗಳಾಗಿದ್ದು, ಓರ್ವ ಕಾರ್ಮಿಕನ ಪರಿಸ್ಥಿತಿ ಚಿಂತಾಜನಕವಾಗಿದೆ ಎಂದು ತಿಳಿದುಬಂದಿದೆ.

    ಮಲ್ಲೇಶ್ವರಂನಲ್ಲಿ ವಾಸವಿದ್ದ ಆಂಧ್ರ ಮೂಲದ ಮುನಿರಾಜು ರೆಡ್ಡಿ ಎಂಬುವರಿಗೆ ಸೇರಿದ ಕಟ್ಟಡ ಇದಾಗಿದೆ. 6 ಅಂತಸ್ತಿನ ಅಪಾರ್ಟ್‌ಮೆಂಟ್ ನಿರ್ಮಾಣ ಕಾರ್ಯ 8 ತಿಂಗಳಿಂದ ನಡೆಯುತ್ತಿದೆ. ಆದ್ರೆ, ಇದೀಗ ಏಕಾಏಕಿ ಕುಸಿದುಬಿದ್ದಿದೆ.  ಕಳಪೆ ಕಾಮಗಾರಿಯಿಂದಲೇ ಕಟ್ಟಡ ಬುಡಮೇಲಾಗಿ ಉರುಳಿ ಬಿದ್ದಿರುವ ಶಂಕೆ ವ್ಯಕ್ತವಾಗಿದೆ. ತಳಪಾಯದಲ್ಲಿ ಕಬ್ಬಿಣದ ರಾಡುಗಳನ್ನು ಸರಿಯಾಗಿ ಅಳವಡಿಕೆ ಮಾಡಿರಲಿಲ್ಲ. ಹಾಗೇ ಕಾಂಪೌಡ್​ ನಿರ್ಮಾಣಕ್ಕೆ ಅಗೆಯಲಾಗಿದ್ದ ಗುಂಡಿಯಲ್ಲಿ ಅಪಾರ ಪ್ರಮಾಣದ ಮಳೆ ನೀರು ಶೇಖರಣೆಗೊಂಡು ಭೂಮಿ ಸಡಿಲವಾಗಿ ಕಟ್ಟಡ ಕುಸಿದಿದೆ ಎನ್ನಲಾಗಿದೆ. ಈ ಘಟನೆ ಸಂಭವಿಸುತ್ತಿದ್ದಂತೆಯೇ ಕಟ್ಟಡ ಮಾಲೀಕ ಮುನಿರಾಜು ರೆಡ್ಡಿ ಸಂಪರ್ಕಕ್ಕೆ ಸಿಗದೇ ನಾಪತ್ತೆಯಾಗಿದ್ದಾರೆ. ನಾಲ್ಕು ಅಂತಸ್ತಿನ ಕಟ್ಟಡ ನಿರ್ಮಾಣಕ್ಕೆ ಮಾತ್ರ ಅನುಮತಿ ಪಡೆದಿರುವ ಬಗ್ಗೆ ಮಾಹಿತಿ ಇದೆ. ಆದ್ರೆ, ನೆಲಮಹಡಿ ಪಾರ್ಕಿಂಗ್​ ಬಿಟ್ಟು 7 ಅಂತಸ್ತಿನ ಕಟ್ಟಡ ನಿರ್ಮಾಣ ಆರೋಪ ಕೇಳಿಬಂದಿದೆ. ಸದ್ಯ ಮುನಿರಾಜು ರೆಡ್ಡಿ ವಿರುದ್ಧ ಹೆಣ್ಣೂರು ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದೆ.

     

    Share Information
    Advertisement
    Click to comment

    You must be logged in to post a comment Login

    Leave a Reply