KARNATAKA
ಪ್ರೈವೇಟ್ ಡಿಟೆಕ್ಟಿವ್ ಏಜೆನ್ಸಿಗಳಿಗೆ CDR ಕೊಟ್ಟು ಹಣ ಮಾಡುತ್ತಿದ್ದ CID ಪೊಲೀಸ್ ಅರೆಸ್ಟ್.!
ಬೆಂಗಳೂರು : ಪ್ರೈವೇಟ್ ಡಿಟೆಕ್ಟಿವ್ ಏಜೆನ್ಸಿಗಳಿಗೆ ಅನಧಿಕೃತವಾಗಿ CDR (Call detail records) ಗಳನ್ನು ನೀಡುತ್ತಿದ್ದ ಪೊಲೀಸ್ ಸಿಬಂದಿಯನ್ನು ಬೆಂಗಳೂರು ಸಿಸಿಬಿ ಬಂಧಿಸಿದೆ.
ಸಿಐಡಿ ಪೊಲೀಸ್ ಸಿಬ್ಬಂದಿ ಮುನಿರತ್ನ ಬಂಧಿತ ಪ್ರಮುಖ ಆರೋಪಿಯಾಗಿದ್ದಾನೆ. ಆರೋಪಿ ಮುನಿರತ್ನ ಹಲವು ವರ್ಷಗಳಿಂದ ಸಿಐಡಿ ಟೆಕ್ನಿಕಲ್ ಸೆಲ್ ನಲ್ಲಿ ಕೆಲಸ ಮಾಡಿಕೊಂಡಿದ್ದ. ಹಿರಿಯ ಅಧಿಕಾರಿಗಳು ಕೇಸ್ ಸಂಬಂಧ ಅಧಿಕೃತವಾಗಿ ಸಿಡಿಆರ್ ಪಡೆಯಲು ಸರ್ವಿಸ್ ಪ್ರವೈಡ್ ಗಳಿಗೆ ನೀಡುವ ಪತ್ರದಲ್ಲಿ ತನಗೆ ಬೇಕಾದ ಫೋನ್ ನಂಬರ್ ಗಳನ್ನ ಸೇರಿಸಿ ಸಿಡಿಆರ್ ಕಳ್ಳದಾರಿಯಲ್ಲಿ ಪಡೆಯುತ್ತಿದ್ದ.
ಸಿಡಿಆರ್ ಬಂದ ನಂತರ ಅಧಿಕೃತವಾದ ಸಿಡಿಆರ್ ಗಳನ್ನ ಅಧಿಕಾರಿಗಳಿಗೆ ನೀಡಿ ಅನಧಿಕೃತ ಸಿಡಿಆರ್ ಗಳನ್ನ ನಾಗೇಶ್ವರ ರೆಡ್ಡಿಗೆ ನೀಡುತ್ತಿರುವುದು ಸಿಸಿಬಿ ತನಿಖೆಯಲ್ಲಿ ಬಹಿರಂಗವಾಗಿದೆ. ಹೆಚ್ಚಾಗಿ ಗಂಡ ಅಥವಾ ಹೆಂಡತಿ ಮತ್ತು ಪ್ರೇಮಿಗಳು ಸಂಬಂಧದಲ್ಲಿ ಅನುಮಾನ ಮೂಡಿ ತಮ್ಮ ಪ್ರೀತಿ ಪಾತ್ರರ ಯಾರ ಸಂಪರ್ಕದಲ್ಲಿದ್ದಾರೆ ಅನ್ನೋದನ್ನ ತಿಳಿದುಕೊಳ್ಳಲು ಈ ಕಾಲ್ ಡಿಟೈಲ್ ನ ಅನಧಿಕೃತವಾಗಿ ಪಡೆದುಕೊಳ್ಳುತ್ತಿದ್ರು ಎನ್ನಲಾಗ್ತಿದೆ.
ಅಷ್ಟೇ ಅಲ್ಲದೆ ಬ್ಯುಸಿನೆಸ್ ಮೆನ್ ಗಳ ಕೆಲ ರಾಜಕೀಯ ವ್ಯಕ್ತಿಗಳು ತಮ್ಮ ಎದುರಾಳಿಗಳ ಸಿಡಿಆರ್ ಪಡೆದಿರೋ ಶಂಕೆ ವ್ಯಕ್ತವಾಗಿದೆ. ಇದ್ರಲ್ಲಿ ಕೆಲ ಪೊಲೀಸ್ ಅಧಿಕಾರಿಗಳ ಪತ್ನಿಯರು ತಮ್ಮ ಪತಿಯ ಕಾಲ್ ಡಿಟೈಲ್ ಪಡೆದಿದ್ದಾರಂತೆ. ಸಿಸಿಬಿ ಹಚ್ಚಿನ ವಿಚಾರಣೆಯಿಂದ ಅನೇಕ ಅಂಶಗಳು ಬಹಿರಂಗಗೊಳ್ಳಲಿವೆ..