Connect with us

    KARNATAKA

    Bengaluru : ಮೀಟರ್‌ ಬಡ್ಡಿ ದಂಧೆಗೆ ಸಿಸಿಬಿ ಬ್ರೇಕ್, 40 ಲಕ್ಷ ಮೌಲ್ಯದ ನಗ-ನಗದು ವಶಕ್ಕೆ..!

    ಬೆಂಗಳೂರು: ರಾಜ್ಯ ರಾಜಧಾನಿಯ ನಾಲ್ಕು ಕಡೆಗಳಲ್ಲಿ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು ಮೀಟರ್‌ ಬಡ್ಡಿ (Meter Baddi) ದಂಧೆ ನಡೆಸುತ್ತಿದ್ದ ಅಡ್ಡೆಗಳಿಂದ ಲಕ್ಷಾಂತರ ರೂ. ನಗದು ಹಾಗೂ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದೆ.

    ಬಡ್ಡಿಗೆ ಎಂದು ಹಣ ಕೊಟ್ಟು ಬಳಿಕ ಟಾರ್ಚರ್ ಕೊಟ್ಟು ಮೀಟರ್ ಲೆಕ್ಕದಲ್ಲಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪದಡಿ 5 ವರ್ಷಗಳ ಬಳಿಕ ಸಿಸಿಬಿ ದಾಳಿ ನಡೆಸಿದೆ.ಸಿಸಿಬಿ ಆರ್ಥಿಕ ಅಪರಾಧ ವಿಭಾಗದ ಅಧಿಕಾರಿಗಳು ದಾಳಿ ಮಾಡಿ ಪರಿಶೀಲನೆ ನಡೆಸಿದ್ದಾರೆ. ಬಡ್ಡಿ ದಂಧೆ ನಡೆಸುತ್ತಿದ್ದವರ ವಿರುದ್ಧ ಮನಿ ಲಾಂಡರಿಂಗ್ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ದಾಳಿ ವೇಳೆ 23 ಲಕ್ಷ ರೂ. ನಗದು, 127 ಗ್ರಾಂ ಚಿನ್ನಾಭರಣ, 10 ಕೆಜಿ ಬೆಳ್ಳಿ, 109 ಚೆಕ್‌ಗಳು, 50 ಅನ್ ಡಿಮಾಂಡ್ ಪ್ರಾಮಿಸರಿ ನೋಟ್, 42 ಖಾಲಿ ಬಾಂಡ್ ಪೇಪರ್, 85 ಶುದ್ಧ ಕ್ರಯ ಪತ್ರಗಳು, 35 ಸಾಲ ನಮೂದಿಸಿದ ದಾಖಲಾತಿ, 11 ಇ-ಸ್ಪಾಂಪ್ ಪೇಪರ್‌ಗಳು, 45 ಪಾಕೆಟ್ ಪುಸ್ತಕ, 15 ಅಗ್ರಿಮೆಂಟ್ ಪ್ರತಿಗಳು, 6 ರೋಲೆಕ್ಸ್ ವಾಚುಗಳನ್ನು ವಶಕ್ಕೆ ಪಡೆಯಲಾಗಿದೆ.ಒಟ್ಟಾರೆ 40 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಸಿಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

    The Mangalore Mirror ಚಾನೆಲ್ ಫಾಲೋ ಮಾಡಿ ಸಾಥ್ ನೀಡಿ👇
    https://www.youtube.com/@MangaloreMirror

    Share Information
    Advertisement
    Click to comment

    Leave a Reply

    Your email address will not be published. Required fields are marked *