KARNATAKA
ನಶೆಯಲ್ಲಿ ಹಸುಗಳ ಕೆಚ್ಚಲು ಕೊಯ್ದ ಆರೋಪಿ ಅರೆಸ್ಟ್

ಬೆಂಗಳೂರು ಜನವರಿ 13: ರಸ್ತೆ ಬದಿಯ ಶೆಡ್ ನಲ್ಲಿ ಮಲಗಿದ್ದ ಹಸುಗಳ ಕೆಚ್ಚಲನ್ನು ಕೊಯ್ದ ಕಿರಾತಕನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ.
ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ 50 ಮೀಟರ್ ಅಂತರದಲ್ಲಿರುವ ಪ್ಲ್ಯಾಸ್ಟಿಕ್, ಬಟ್ಟೆ ಹೊಲಿಯುವ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದನು ಎಂದು ತಿಳಿದುಬಂದಿದೆ.

ಚಾಮರಾಜಪೇಟೆಯ ವಿನಾಯಕ ನಗರದ ಓಲ್ಡ್ ಪೆನ್ನನ್ ಮೊಹಲ್ಲಾದ ರಸ್ತೆ ಬದಿಯ ಶೆಡ್‌ನಲ್ಲಿ ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ. ಮಚ್ಚಿನಿಂದ ಕಾಲಿಗೆ ಹೊಡೆದಿದ್ದ ಆರೋಪಿ. ಮದ್ಯದ ನಶೆಯಲ್ಲಿ ಹಸುಗಳ ಕೆಚ್ಚಲು ಕೊಯ್ದಿರುವುದಾಗಿ ಆರೋಪಿ ತಪ್ರೊಪ್ಪಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದರು. ಆರೋಪಿ ಒಬ್ಬನೇ ಕೃತ್ಯ ಎಸಗಿದ್ದಾನೆ. ಬೇರೆ ಯಾರೂ ಭಾಗಿ ಆಗಿಲ್ಲ. ಆದರೂ ತನಿಖೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದರು.
1 Comment