Connect with us

    KARNATAKA

    ಬೆಂಗಳೂರು: ಶಿಕ್ಷಕರ ಏಟಿಗೆ ನಾಲ್ಕನೇ ತರಗತಿ ವಿದ್ಯಾರ್ಥಿನಿ ಬಲಿ

    ಬೆಂಗಳೂರು, ನವೆಂಬರ್ 05 : ಸಿಲಿಕಾನ್ ಸಿಟಿ ಬೆಂಗಳೂರಿನ ಖಾಸಗಿ ಶಾಲೆಯಲ್ಲಿ ಶಿಕ್ಷಕರ ಏಟಿಗೆ ವಿದ್ಯಾರ್ಥಿನಿ ಬಲಿಯಾಗಿದ್ದಾಳೆ.

    ರಾಮಚಂದ್ರಾಪುರದ ಖಾಸಗಿ ಶಾಲೆಯಲ್ಲಿ ನಾಲ್ಕನೇ ತರಗತಿ ಓದುತ್ತಿದ್ದ ನಿಶಿತಾ ಎಂಬ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ. ನಿನ್ನೆ ಮಧ್ಯಾಹ್ನ ಈ ಘಟನೆ ನಡೆದಿದ್ದು, ಶಿಕ್ಷಕನ ಹೊಡೆತಕ್ಕೆ ವಿದ್ಯಾರ್ಥಿನಿ ತರಗತಿಯಲ್ಲೇ ಎಚ್ಚರ ತಪ್ಪಿ ಬಿದ್ದಿದ್ದಾಳೆ. ಕೂಡಲೇ ಆಕೆಯನ್ನು ರಾಮಯ್ಯ ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾಳೆ.

    ಈ ಸಂಬಂಧ ಗಂಗಮ್ಮನ ಗುಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ, ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದ್ದು, ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply