Connect with us

KARNATAKA

ಪುಟಾಣಿ ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ಟೆಕ್ಕಿ ದಂಪತಿ

ಬೆಂಗಳೂರು ಜನವರಿ 06: ಬೆಂಗಳೂರಿನಲ್ಲಿ ಒಂದು ಹೃದಯ ವಿದ್ರಾವಕ ಘಟನೆ ನಡೆದಿದ್ದು, ಇಬ್ಬರು ಪುಟಾಣಿ ಮಕ್ಕಳನ್ನು ಕೊಂದು ದಂಪತಿ ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಸದಾಶಿವ ನಗರದ ಆರ್.ಎಂ.ವಿ ಎರಡನೇ ಹಂತದ ಟೆಂಪಲ್ ರಸ್ತೆಯಲ್ಲಿ ನಡೆದಿದೆ.


ಪತಿ ಅನೂಪ್‌ (38), ರಾಖಿ(35), ಅನುಪ್ರಿಯಾ (5) ವರ್ಷ ಮತ್ತು ಪ್ರಿಯಾಂಶ್ (2) ಮೃತಪಟ್ಟಿದ್ದಾರೆ. ಅನೂಪ್‌ ಉತ್ತರ ಪ್ರದೇಶ ಮೂಲದವರಾಗಿದ್ದು ಖಾಸಗಿ ಕಂಪನಿಯಲ್ಲಿ ಸಾಫ್ಟ್‌ವೇರ್‌ ಕನ್ಸಲ್ಟೆಂಟ್‌ ಆಗಿ ಕೆಲಸ ಮಾಡುತ್ತಿದ್ದರು. ಇಂದು ಬೆಳಗ್ಗೆ ಮನೆಗೆ ಕೆಲಸವರು ಬಂದಾಗ ಆತ್ಮಹತ್ಯೆ ಪ್ರಕರಣ ಬೆಳಕಿಗೆ ಬಂದಿದೆ.

ರಾತ್ರಿ ಇಬ್ಬರು ಮಕ್ಕಳನ್ನು ಹತ್ಯೆ ಮಾಡಿದ ಬಳಿಕ ದಂಪತಿ ಮನೆಯಲ್ಲೇ ನೇಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಸದಾಶಿವ ನಗರ ಪೊಲೀಸರು ಭೇಟಿ ಪರಿಶೀಲನೆ ನಡೆಸುತ್ತಿದ್ದಾರೆ. ಅನೂಪ್ ಮನೆಯಲ್ಲಿ ಮೂರು ಜನ ಕೆಲಸ ಮಾಡುತ್ತಿದ್ದರು. ಅನುಪ್ರಿಯಾಗೆ ಆರೋಗ್ಯ ಸಮಸ್ಯೆ ಇತ್ತು. ಈ ವಿಚಾರಕ್ಕೆ ದಂಪತಿ ಬಹಳ ಬೇಸರದಲ್ಲಿದ್ದರು. ಮೊದಲ ಮಗುವಿಗೆ ಮಾನಸಿಕ ತೊಂದರೆ ಇದ್ದ ಕಾರಣ ದಂಪತಿ ಬಹಳ ಕುಗ್ಗಿ ಹೋಗಿದ್ದರು. ನಿನ್ನೆ ರಾತ್ರಿ 10 ಗಂಟೆಯವರೆಗೂ ದಂಪತಿ ಖುಷಿಯಾಗಿಯೇ ಇದ್ದರು ಎಂದು ಕೆಲಸದವರು ತಿಳಿಸಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *