ಬೆಂಗಳೂರು ಅಕ್ಟೋಬರ್ 09: ಲಾಡ್ಜ್ ರೂಮ್ ನಲ್ಲಿ ಪ್ರೇಮಿಗಳ ನಡುವೆ ನಡೆದ ಗಲಾಟೆ ಬೆಂಕಿ ಅವಘಡಕ್ಕೆ ಕಾರಣವಾಗಿ ಕೊನೆಗೆ ಇಬ್ಬರೂ ಸಾವನಪ್ಪಿದ ಘಟನೆ ಬೆಂಗಳೂರಿನ ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿಂದು ಮಧ್ಯಾಹ್ನ ನಡೆದಿದೆ. ಗದಗ ಮೂಲದ ಯುವಕ ರಮೇಶ್ ಮತ್ತು ಹುನಗುಂದ ಮೂಲದ ಕಾವೇರಿ ಬಡಿಗೇರ್ ಮೃತರು

ಕಿಚನ್ ಫ್ಯಾಮಿಲಿ ರೆಸ್ಟೋರೆಂಟ್ ಬಿಲ್ಡಿಂಗ್ನಲ್ಲಿದ್ದ ಲಾಡ್ಜ್ನಲ್ಲಿ ಬೆಂಕಿ ಅವಘಡ ಸಂಭವಿಸಿದೆ. ಈ ವೇಳೆ ಯುವಕ ಮತ್ತು ಯುವತಿ ಲಾಡ್ಜ್ನ ಒಂದೇ ರೂಮಿನಲ್ಲಿದ್ದರು. ಲಾಡ್ಜ್ನ ಬಾತ್ರೂಂ ಒಳಗಡೆ ಯುವತಿ ಇದ್ದು, ಬಾಗಿಲು ಹಾಕಲಾಗಿತ್ತು. ಹೊಗೆ ಬಂದ ತಕ್ಷಣ ಯುವತಿಯೇ ಲಾಡ್ಜ್ನವರಿಗೆ ಕರೆ ಮಾಡಿದ್ದಳು. ರೂಂ ಕೂಡ ಲಾಕ್ ಆಗಿತ್ತು. ತಕ್ಷಣ ಅಗ್ನಿಶಾಮಕ ಸಿಬ್ಬಂದಿ ಬಂದು ಬಾಗಿಲು ಹೊಡೆದು ಒಳಹೋಗಿದ್ದಾರೆ. ಅಷ್ಟೊತ್ತಿಗಾಗಲೇ ಇಬ್ಬರು ಮೃತಪಟ್ಟಿದ್ದರು.
ಸದ್ಯ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿರುವ ಯಲಹಂಕ ನ್ಯೂ ಟೌನ್ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆದ ವೇಳೆ ರಮೇಶ್ ಸುಟ್ಟಗಾಯಗಳಿಂದ ಸಾವನ್ನಪ್ಪಿದ್ದು, ಯುವತಿ ಕಾವೇರಿ ಉಸಿರುಗಟ್ಡಿ ಸಾವನ್ನಪ್ಪಿರೋದು ಗೊತ್ತಾಗಿದೆ. ಇವರಿಬ್ಬರು ಪ್ರೇಮಿಗಳು ಅನ್ನೋ ಶಂಕೆ ಕೂಡ ವ್ಯಕ್ತವಾಗಿದೆ. ಇಬ್ಬರ ನಡುವೆ ಜಗಳ ನಡೆದು ರಮೇಶ್ ಪೆಟ್ರೋಲ್ ಸುರಿದುಕೊಂಡು ಯುವತಿಗೂ ಪೆಟ್ರೋಲ್ ಸುರಿಯೋಕೆ ಯತ್ನಿಸಿದ್ದಾನೆ.
ಈ ವೇಳೆ ಯುವತಿ ಬಾತ್ ರೂಂ ಒಳಗೆ ಹೋಗಿ ಬಾಗಿಲು ಹಾಕಿಕೊಂಡಿದ್ದಾರೆ. ಆಗ ರಮೇಶ್ ತಾನು ಬೆಂಕಿ ಹಚ್ಚಿಕೊಂಡು ಬಾತ್ ರೂಂ ಬಾಗಿಲಿಗೂ ಪೆಟ್ರೋಲ್ ಸುರಿದು ಬೆಂಕಿಹಾಕಿದ್ದಾನೆ. ಅದರಿಂದಲೇ ಲಾಡ್ಜ್ ಪೂರ್ತಿ ಬೆಂಕಿ ಅವರಿಸಿಕೊಂಡಿದೆ ಅನ್ನೋ ಶಂಕೆ ವ್ಯಕ್ತವಾಗಿದೆ. ಸದ್ಯ ಯಲಹಂಕ ನ್ಯೂ ಟೌನ್ ಪೊಲೀಸರು ತನಿಖೆ ಕೈಗೊಂಡಿದ್ದು, ಇದು ಆತ್ಮಹತ್ಯೆ ನಾ ಅಥವಾ ಬೆಂಕಿಯ ಅವಘಡ ದಿಂದ ನಡೆದಿದ್ಯಾ ಅನ್ನೋದು ಗೊತ್ತಾಗಬೇಕಿದೆ.