Connect with us

KARNATAKA

ರಾಜಧಾನಿ ಬೆಂಗಳೂರಿನಲ್ಲಿ ಭೀಕರ ರಸ್ತೆ ಅಪಘಾತ

ಬೆಂಗಳೂರು, ನವಂಬರ್ 18: ರಾಜಧಾನಿ ಬೆಂಗಳೂರಿನಲ್ಲಿ ಮತ್ತೊಂದು ಭೀಕರ ಅಪಘಾ ತ ಸಂಭವಿಸಿದ್ದು, ಕಾರೊಂದು ಡಿವೈಡರ್ಗೆ ಡಿಕ್ಕಿ ಹೊಡೆದು ಮತ್ತೊಂದು ರಸ್ತೆಗೆ ಹಾರಿ ಇನ್ನೊಂದು ಕಾರಿನ ಮೇಲೆ ಬಿದ್ದು ಪಲ್ಟಿಯಾಗಿದೆ. ಬೆಂಗಳೂರು ಉತ್ತರ ತಾಲೂಕಿನ ಬೆಟ್ಟಹಲಸೂರು ಕ್ರಾಸ್ ಬಳಿ ಅಪಘಾತ ಸಂಭವಿಸಿದೆ.

ಏರ್ಪೋರ್ಟ್ ರಸ್ತೆಯಾಗಿರುವ ಇಲ್ಲಿ ಕಾರೊಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಅಪಘಾ ತದ ತೀವ್ರತೆಗೆ ಇನ್ನೊಂದು ರಸ್ತೆಗೆ ನೆಗೆದ ಕಾರು ಎದುರಿನಿಂದ ಬರುತ್ತಿದ್ದ ಮತ್ತೊಂದು ಕಾರಿನ ಮೇಲೆ ಬಿದ್ದು ಪಲ್ಟಿ ಹೊಡೆದಿದೆ.

ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವಿಗೀಡಾಗಿದ್ದು, ಇನ್ನಿಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಕಾರು ಅಪ್ಪಚ್ಚಿಯಾಗಿದ್ದು, ಮೂವರೂ ಅವಶೇಷಗಳೊಳಗೆ ಸಿಲುಕಿಕೊಂಡಿದ್ದಾರೆ.

Advertisement
Click to comment

You must be logged in to post a comment Login

Leave a Reply