KARNATAKA
ಆಸ್ಪತ್ರೆಯಲ್ಲಿ ಬೆಡ್ ಸಿಗದೆ ಪರದಾಡಿದ ಮಾಜಿ ಸಿಎಂ ಕುಮಾರಸ್ವಾಮಿ
ಬೆಂಗಳೂರು ಎಪ್ರಿಲ್ 17: ಕೋವಿಡ್ ಎರಡನೇ ಅಲೆಯ ಬಿಸಿ ಈ ಬಾರಿ ರಾಜಕೀಯ ಜನಪ್ರತಿನಿಧಿಗಳಿಗೆ ತಟ್ಟಿದ್ದು, ಕೊರೊನಾ ಸೊಂಕಿಗೆ ಒಳಗಾಗಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರಿಗೆ ಆಸ್ಪತ್ರೆಗೆ ದಾಖಲಾಗಲು ಬೆಡ್ ಸಿಗದೇ ಪರದಾಡಿದ ಘಟನೆ ನಡೆದಿದೆ.
ಬಸವಕಲ್ಯಾಣ ಚುನಾವಣಾ ಪ್ರಚಾರ ಮುಗಿಸಿ ಬೆಂಗಳೂರಿಗೆ ಬಂದ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನಲೆ ಮನೆಗೆ ಹೋಗದೇ ಹೋಟೆಲ್‌ನಲ್ಲೇ ಉಳಿದುಕೊಂಡಿದ್ದರು. ಶನಿವಾರ ಬೆಳಿಗ್ಗೆ ಆರೋಗ್ಯ ತಪಾಸಣೆಗೆ ಒಳಗಾದಾಗ ಕೋವಿಡ್ ದೃಢ ಪಟ್ಟಿದೆ. ವೈದ್ಯರನ್ನು ಸಂಪರ್ಕಿಸಿದಾಗ ಆಸ್ಪತ್ರೆಗೆ ದಾಖಲಾಗಲು ಸೂಚಿಸಿದ್ದಾರೆ. ಆಸ್ಪತ್ರೆ ಸಂಪರ್ಕಿಸಿದಾಗ ಬೆಡ್ ಲಭ್ಯವಿಲ್ಲ ಎಂಬ ಮಾಹಿತಿ ಬಂದ ಬಳಿಕ, ತೋಟದ ಮನೆಯಲ್ಲಿ ಪ್ರತ್ಯೇಕವಾಸ ಮಾಡಬಹುದೇ ಎಂದು ವೈದ್ಯರ ಸಲಹೆ ಕೇಳಿದ್ಧಾರೆ. ಅದಕ್ಕೆ ಅವರ ಕುಟುಂಬ ವೈದ್ಯರು ಒಪ್ಪಿಗೆ ನೀಡಿಲ್ಲ.
ಆಸ್ಪತ್ರೆಯಲ್ಲಿ ಬೆಡ್ ಸಿಗದೇ ಇರುವ ಮಾಹಿತಿ ತಿಳಿಯುತ್ತಿದ್ದಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್, ಕುಮಾರಸ್ವಾಮಿ ಅವರನ್ನು ಸಂಪರ್ಕಿಸಿ ಮಾಹಿತಿ ಪಡೆದಿದ್ದಲ್ಲದೇ , ಖಾಸಗಿ ಆಸ್ಪತ್ರೆಯೊಂದಕ್ಕೆ ಮಾತನಾಡಿ ಬೆಡ್ ವ್ಯವಸ್ಥೆ ಮಾಡಿರುವುದಾಗಿ ಗೊತ್ತಾಗಿದೆ.