Connect with us

KARNATAKA

ರಾಜಧಾನಿ ಬೆಂಗಳೂರಿನಲ್ಲಿ ಮತ್ತೆ ಲಾಕ್ ಡೌನ್ ಜಾರಿ!!

ಬೆಂಗಳೂರು, ಜುಲೈ 11 : ಕೊರೊನಾ ಸೋಂಕು ತೀವ್ರವಾಗಿ ಹರಡುತ್ತಿರುವ ರಾಜಧಾನಿ ಬೆಂಗಳೂರಿನಲ್ಲಿ ಜುಲೈ 14ರಿಂದ 23ರ ವರೆಗೆ ಒಂದು ವಾರ ಕಾಲ ಲಾಕ್ ಡೌನ್ ಜಾರಿಗೆ ಆದೇಶ ಮಾಡಲಾಗಿದೆ. ಸಿಎಂ ಯಡಿಯೂರಪ್ಪ ಈ ಬಗ್ಗೆ ಬೆಂಗಳೂರು ಭಾಗದ ಶಾಸಕರು ಮತ್ತು ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು ಕೊರೊನಾ ಸೋಂಕಿನ ನಿಯಂತ್ರಣಕ್ಕಾಗಿ ಮತ್ತೆ ಲಾಕ್ ಡೌನ್ ಜಾರಿಗೆ ತರಲು ನಿರ್ಧರಿಸಿದ್ದಾರೆ.


ಆಬಳಿಕ ಲಾಕ್ ಡೌನ್ ಜಾರಿಗೆ ತರುವ ವಿಚಾರದಲ್ಲಿ ಕೇಂದ್ರ ಸರಕಾರದ ಅನುಮತಿ ಪಡೆದು ರಾತ್ರಿ 8 ಗಂಟೆ ಸುಮಾರಿಗೆ ಲಾಕ್ ಡೌನ್ ಘೋಷಣೆ ಮಾಡಿದ್ದಾರೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಪ್ರದೇಶಗಳಲ್ಲಿ ಲಾಕ್ ಡೌನ್ ಜಾರಿ ಮಾಡಲಿದ್ದು ಮಂಗಳವಾರ ರಾತ್ರಿ 8 ಗಂಟೆಯ ಬಳಿಕ ಆದೇಶ ಜಾರಿಗೆ ಬರಲಿದೆ.


ಆದರೆ, ಲಾಕ್ ಡೌನ್ ಸಂದರ್ಭದಲ್ಲಿ ಹಾಲು, ದಿನಸಿ ವಸ್ತುಗಳು ಮತ್ತು ತರಕಾರಿಗಳು ಲಭ್ಯ ಇರಲಿದ್ದು ಜನರು ಗಾಬರಿಗೊಳ್ಳುವ ಅಗತ್ಯವಿರಲ್ಲ ಎಂದು ಸಿಎಂ ತಿಳಿಸಿದ್ದಾರೆ. ಸೋಂಕು ಹೆಚ್ಚಿರುವ ಬೆಂಗಳೂರು ಸೇರಿದಂತೆ ಏಳು ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಗೆ ತರಲಿದ್ದಾರೆಂಬ ಮಾತು ಕೇಳಿಬಂದಿತ್ತು. ಆದರೆ ಕೊನೆಕ್ಷಣದಲ್ಲಿ ಬೆಂಗಳೂರಿನಲ್ಲಿ ಮಾತ್ರ ಜನರ ಸಂಚಾರಕ್ಕೆ ನಿಯಂತ್ರಣ ಹೇರಲಾಗಿದೆ.
ಸೋಮವಾರ ಮತ್ತು ಮಂಗಳವಾರ ಎರಡು ದಿನಗಳಲ್ಲಿ ಜನರಿಗೆ ಅಗತ್ಯ ವಸ್ತುಗಳನ್ನು ಕೊಳ್ಳಲು ಅವಕಾಶ ನೀಡಲಾಗಿದೆ.

Facebook Comments

comments