Connect with us

LATEST NEWS

ಮಂಗಳೂರು – ಬೆಂಗಳೂರು ನಡುವೆ ಎಕ್ಸ್ ಪ್ರೇಸ್ ವೇ – 2028 ರಿಂದ ನಿರ್ಮಾಣ ಕಾಮಗಾರಿ ಆರಂಭ ಸಾಧ್ಯತೆ

ಮಂಗಳೂರು ಫೆಬ್ರವರಿ 24 : ಮಂಗಳೂರು ಹಾಗೂ ಬೆಂಗಳೂರಿನಲ್ಲಿರುವ ಕರಾವಳಿಗರಿಗೆ ಗುಡ್ ನ್ಯೂಸ್ ಬಂದಿದ್ದು, ಬೆಂಗಳೂರು ಮತ್ತು ಮಂಗಳೂರು ಮಧ್ಯೆ ಎಕ್ಸ್‌ಪ್ರೆಸ್‌ವೇ ನಿರ್ಮಾಣಕ್ಕೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಮುಂದಾಗಿದೆ. 2028 ರಿಂದ ಕಾಮಗಾರಿ ಪ್ರಾರಂಭವಾಗುವ ಸಾಧ್ಯತೆ ಇದೆ.


ಈ ಮಹತ್ವಾಕಾಂಕ್ಷಿ ಯೋಜನೆಯನ್ನು ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಮತ್ತು ಕರ್ನಾಟಕ ಲೋಕೋಪಯೋಗಿ ಇಲಾಖೆ ಕೈಗೆತ್ತಿಕೊಂಡಿವೆ. ಎಲ್ಲವೂ ನಿಗದಿಯಂತೆ ನಡೆದರೆ 2028 ರಿಂದ ನಿರ್ಮಾಣ ಕಾಮಗಾರಿ ಆರಂಭವಾಗಲಿದೆ.


ಸಮಗ್ರ ಯೋಜನಾ ವರದಿಗಾಗಿ ಸರ್ಕಾರ ಜುಲೈನಲ್ಲಿ ಟೆಂಡರ್‌ ಆಹ್ವಾನಿಸಿತ್ತು. ನವೆಂಬರ್‌ ವೇಳೆಗೆ ಒಟ್ಟು 9 ಕಂಪನಿಗಳು ಬಿಡ್‌ ಸಲ್ಲಿಸಿದ್ದು ಈ ಪೈಕಿ ಒಂದು ಕಂಪನಿಯನ್ನು ಆಯ್ಕೆ ಮಾಡಲಾಗುತ್ತದೆ. ಆಯ್ಕೆಯಾದ ಕಂಪನಿಗೆ ಡಿಪಿಆರ್‌ ಪೂರ್ಣಗೊಳಿಸಲು 540 ದಿನಗಳ ಸಮಯವನ್ನು ನೀಡಲಾಗುತ್ತದೆ. ಡಿಪಿಆರ್‌ ಪೂರ್ಣಗೊಂಡ ಬಳಿಕ ಎಕ್ಸ್‌ಪ್ರೆಸ್‌ವೇ ನಿರ್ಮಾಣದ ಕೆಲಸ ಆರಂಭವಾಗಲಿದೆ. ಹಾಸನದ ಮೂಲಕ ಈ ಎಕ್ಸ್‌ಪ್ರೆಸ್‌ವೇ ಹಾದು ಹೋಗಲಿದೆ. ಸದ್ಯ ಈಗ 350 ಕಿ.ಮೀ ದೂರ ಕ್ರಮಿಸಲು ಸುಮಾರು 7-8 ಗಂಟೆ ಸಮಯ ತೆಗೆದುಕೊಳ್ಳುತ್ತದೆ. ನಾಲ್ಕು ಅಥವಾ ಆರು ಪಥಗಳನ್ನು ಒಳಗೊಂಡಿರುವ ಈ ಎಕ್ಸ್‌ಪ್ರೆಸ್‌ವೇ ನಿರ್ಮಾಣವಾದರೆ ಸಮಯ ಅರ್ಧಕ್ಕರ್ಧ ಕಡಿಮೆಯಾಗಲಿದೆ.

Share Information
Continue Reading
Advertisement
1 Comment

1 Comment

    Leave a Reply

    Your email address will not be published. Required fields are marked *