KARNATAKA
ಬೆಂಗಳೂರು – ಹೆಂಡತಿಯನ್ನು ಕೊಂದು ಪೀಸ್ ಪೀಸ್ ಮಾಡಿ ಸೂಟ್ ಕೇಸ್ ಗೆ ತುಂಬಿದ ಪತಿ

ಬೆಂಗಳೂರು ಮಾರ್ಚ್ 27 : ಪತಿಯೊಬ್ಬ ಹೆಂಡತಿಯನ್ನು ಕೊಂದು ಆಕೆಯ ದೇಹವನ್ನು ಕತ್ತರಿಸಿ ಸೂಟ್ ಕೇಸ್ ಗೆ ತುಂಬಿಸಿರುವ ಘಟನೆ ಬೆಂಗಳೂರಿನ ಹುಳಿಮಾವು ಸಮೀಪದ ದೊಡ್ಡ ಕನ್ನಹಳ್ಳಿಯಲ್ಲಿ ನಡೆದಿದೆ.
ಮಹಾರಾಷ್ಟ್ರ ಮೂಲದ ರಾಕೇಶ್ ಕೃತ್ಯ ಎಸಗಿರುವ ಆರೋಪಿ. ಗೌರಿ ಅನಿಲ್ ಸಾಂಬೆಕರ್ ಮೃತ ಪತ್ನಿ. ಮಹಾರಾಷ್ಟ್ರದಲ್ಲಿರುವ ಪತ್ನಿ ಪೋಷಕರಿಗೆ ಪೋನ್ ಕರೆ ಮಾಡಿ ಆರೋಪಿ ರಾಕೇಶ್ ಸಾವಿನ ಸುದ್ದಿ ತಿಳಿಸಿದ್ದಾನೆ.
ಮಹಾರಾಷ್ಟ್ರ ಮೂಲದ ರಾಕೇಶ್ ಹಾಗೂ ಗೌರಿ ಅನಿಲ್ ಸಾಂಬೆಕರ್ ದಂಪತಿ, ಖಾಸಗಿ ಕಂಪೆನಿಯಲ್ಲಿ ಕೆಲಸ ಮಾಡುತ್ತಿದ್ದು ಬೆಂಗಳೂರಿನ ಕನ್ನಹಳ್ಳಿಯಲ್ಲಿ ನೆಲೆಸಿತ್ತು. ವರ್ಕ್ ಫ್ರಂ ಹೋಂ ಹಿನ್ನೆಲೆಯಲ್ಲಿ ಮನೆಯಿಂದಲೇ ಕೆಲಸ ಮಾಡುತ್ತಿದ್ದರು. ಆದರೆ ಗೌರಿ ಅನಿಲ್ ನನ್ನು ರಾಕೇಶ್ ಹತ್ಯೆ ಮಾಡಿದ್ದಾನೆ. ನಂತರ ದೇಹವನ್ನು ಏನು ಮಾಡಬೇಕು ಎಂದು ತೋಚದೆ ತಂಡುಗಳಾಗಿ ಕತ್ತರಿಸಿ ಸೂಟ್ ಕೇಸ್ ನಲ್ಲಿ ತುಂಬಿಟ್ಟಿದ್ದಾನೆ. ಅಷ್ಟೇ ಅಲ್ಲದೆ ಈ ವಿಚಾರವನ್ನು ಮಹಾರಾಷ್ಟ್ರದಲ್ಲಿರುವ ಪತ್ನಿಯ ಪೋಷಕರಿಗೆ ತಿಳಿಸಿದ್ದಾನೆ. ಈ ವಿಚಾರ ತಿಳಿದು ಆತಂಕಗೊಂಡ ಗೌರಿ ಪೋಷಕರು ಕೂಡಲೇ ಮಹಾರಾಷ್ಟ್ರ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ಮಹಾರಾಷ್ಟ್ರ ಪೊಲೀಸರು ಕೂಡಲೇ ಬೆಂಗಳೂರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದು, ಕೂಡಲೇ ಸ್ಥಳಕ್ಕೆ ಹುಳಿಮಾವು ಪೊಲೀಸರು ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಪತಿ ರಾಕೇಶ್ ಇನ್ನೂ ಪೊಲೀಸರಿಗೆ ಸಿಕ್ಕಿಲ್ಲ. ಹುಳಿಮಾವು ಪೊಲೀಸರಿಂದ ರಾಕೇಶ್‌ಗಾಗಿ ಹುಡುಕಾಟ ನಡೆದಿದೆ.
1 Comment