KARNATAKA
ಬೆಂಗಳೂರು- ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತ – ಹೊತ್ತಿ ಉರಿದ ಕಾರು
ಮಂಡ್ಯ ಅಕ್ಟೋಬರ್ 14 : ಬೆಂಗಳೂರು ಮೈಸೂರು ಹೆದ್ದಾರಿಯಲ್ಲಿ ಸರಣಿ ಅಪಘಾತವಾಗಿದ್ದು, ಅಪಘಾತದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಾರು ಸೇರಿದಂತೆ ನಾಲ್ಕು ಕಾರು ಜಖಂಗೊಂಡಿದ್ದರೆ. ಒಂದು ಕಾರು ಬೆಂಕಿಗಾಹುತಿಯಾಗಿದೆ. ಅದೃಷ್ಠವಶಾತ್ ಈ ಅಪಘಾತದಲ್ಲಿ ಯಾವುದೇ ಸಾವು ಸಂಭವಿಸಿಲ್ಲ.
ಬೆಂಗಳೂರು- ಮೈಸೂರು ಹೆದ್ದಾರಿಯ ಶ್ರೀರಂಗಪಟ್ಟಣ ತಾಲ್ಲೂಕಿನ ಟಿ.ಎಂ. ಹೊಸೂರು ಗೇಟ್ ಬಳಿ ಬೆಂಗಳೂರು ಕಡೆಯಿಂದ ಮೈಸೂರು ಕಡೆಗೆ ತೆರಳುವಾಗ ಫೋಕ್ಸ್ ವ್ಯಾಗನ್ ಕಾರಿಗೆ ಸಿಮೆಂಟ್ ಸಾಗಿಸುತ್ತಿ ಲಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮುಂದೆ ಚಲಿಸುತ್ತಿದ್ದ ನಾಲ್ಕು ಕಾರುಗಳು ಡಿಕ್ಕಿಯಾಗಿವೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್.ಯತೀಶ್ ಚಲಿಸುತ್ತಿದ್ದ ಕಾರಿಗೂ ಡಿಕ್ಕಿಯಾಗಿದೆ.
ಡಿಕ್ಕಿಯ ನಂತರ ಫೋಕ್ಸ್ ವ್ಯಾಗನ್ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಾರಿಗೆ ಬೆಂಕಿ ಆವರಿಸಿಕೊಳ್ಳುವಷ್ಟರಲ್ಲಿ ಸ್ಥಳೀಯರು ಕಾರಿನಲ್ಲಿ ಇದ್ದವರನ್ನು ರಕ್ಷಿಸಿದ್ದಾರೆ. ಕಾರಿನಲ್ಲಿದ್ದ ಬೆಂಗಳೂರಿನ ನವ ದಂಪತಿ ಯಶವಂತ್- ಯಶಸ್ವಿನಿ ಹಾಗೂ ಚಾಲಕ ರಾಘವೇಂದ್ರ ಅಪಾಯದಿಂದ ಪಾರಾಗಿದ್ದಾರೆ.
You must be logged in to post a comment Login