Connect with us

    KARNATAKA

    ಬೆಂಗಳೂರು: ಪ್ರತಿಷ್ಠಿತ ಕಾಲೇಜಿನಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ವಿದ್ಯಾರ್ಥಿಗಳು!

    ಬೆಂಗಳೂರು, ನವೆಂಬರ್ 19: ನಗರದ ಖಾಸಗಿ ಕಾಲೇಜೊಂದರಲ್ಲಿ  ಮೂವರು ವಿದ್ಯಾರ್ಥಿಗಳು ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿರುವ ಘಟನೆ ನಡೆದಿದೆ.

    ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನ ಮೂವರು ವಿದ್ಯಾರ್ಥಿಗಳು ಕಾಲೇಜಿನಲ್ಲಿ ನಡೆಯುತ್ತಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದರು. ಈ ಬಗ್ಗೆ ವೀಡಿಯೋ ವೈರಲ್ ಆಗುತ್ತಿದ್ದಂತೆ ಸ್ಥಳೀಯರು ಕಾಲೇಜಿನ ವಿದ್ಯಾರ್ಥಿಗಳನ್ನು ತರಾಟೆಗೆ ತೆಗೆದುಕೊಂಡಿದ್ದರು. ಜೊತೆಗೆ ಅದೇ ಕಾಲೇಜಿನ ವಿದ್ಯಾರ್ಥಿಗಳು ಮತ್ತು ಸಹಪಾಠಿಗಳು ಜೈ ಕರ್ನಾಟಕ ಮಾತೆ ಎನ್ನಬೇಕೆಂದು ಪಟ್ಟು ಹಿಡಿದಿದ್ದರು.

    ಈ ಘಟನೆಯಿಂದ ಪರಿಸ್ಥಿತಿ ಹದಗೆಡುತ್ತಿದ್ದಂತೆ ಸ್ಥಳಕ್ಕೆ ಮಾರತ್‌ಹಳ್ಳಿ ಪೊಲೀಸರು ಆಗಮಿಸಿ ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ ಮೂವರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ವೇಳೆ ತಮಾಷೆಗಾಗಿ ಪಾಕಿಸ್ತಾನ ಪರ ಜಿಂದಾಬಾದ್ ಘೋಷಣೆ ಕೂಗಿದ್ದಾಗಿ ಹೇಳಿಕೆ ನೀಡಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply