KARNATAKA
ಬೆಂಗಳೂರು ಮಳೆಗೆ ಬೈಕ್ ಮೇಲೆ ಮರ ಬಿದ್ದು ಮೂರು ವರ್ಷದ ಮಗು ಸಾವು

ಬೆಂಗಳೂರು ಮಾರ್ಚ್ 23: ಬೆಂಗಳೂರಿನಲ್ಲಿ ನಿನ್ನೆ ಸುರಿದ ಮಳೆ ಸಂದರ್ಭ ಚಲಿಸುತ್ತಿದ್ದ ಬೈಕ್ ಮೇಲೆ ಮರ ಬಿದ್ದ ಪರಿಣಾಮ ಮೂರು ವರ್ಷ ಪ್ರಾಯದ ಮಗುವೊಂದು ಸಾವನಪ್ಪಿದ ಘಟನೆ ಬೆಂಗಳೂರಿನ ರಾತ್ರಿ ಪುಲಕೇಶಿನಗರ ಪೊಲೀಸ್ ಠಾಣಾ ವ್ಯಾಪ್ತಿಯ ಜೀವನಹಳ್ಳಿಯಲ್ಲಿ ನಡೆದಿದೆ.
ರಕ್ಷಾ ಎಂಬ ಮೂರು ವರ್ಷದ ಹೆಣ್ಣು ಮಗು ತಂದೆ ಸತ್ಯ ಜೊತೆಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಗಾಳಿ ಮಳೆಗೆ ರಸ್ತೆ ಬದಿ ಮರ ಬಿದ್ದಿದೆ. ಪರಿಣಾಮ ಬೈಕ್ ನಲ್ಲಿ ಮುಂಭಾಗದಲ್ಲಿ ಕುಳಿತ್ತಿದ್ದ ರಕ್ಷಾ ತಲೆ ಮೇಲೆಯೇ ಮರದ ತುಂಡು ಬಿದ್ದು ತೀವ್ರ ರಕ್ತಸ್ರಾವವಾಗಿ ಕೊನೆಯುಸಿರೆಳೆದಿದ್ದಾಳೆ. ಕಮ್ಮನಹಳ್ಳಿ ಬಳಿಯ ಕುಳ್ಳಪ್ಪ ಸರ್ಕಲ್ ನಿವಾಸಿಗಳಾದ ಶಕ್ತಿ ಮತ್ತು ಸತ್ಯ ದಂಪತಿಯ 3ವರ್ಷದ ಮಗು ರಕ್ಷಾ ಪ್ರಾಣಕಳೆದುಕೊಂಡ ಬಾಲಕಿ.

ತಂದೆ ಜೊತೆಗೆ ಮಾವ ಮುರುಳಿ ಮನೆಗೆ ಬೈಕ್ ನಲ್ಲಿ ಬಂದಿದ್ದ ಮಗು ವಾಪಸ್ ಮನೆಗೆ ಹೊಗ್ತಿದ್ದಾಗ ಜೀವನಹಳ್ಳಿ ರಸ್ತೆಯಲ್ಲಿದ್ದ ಹೊಂಗೆ ಮರ ಬುಡಸಮೇತ ಬೈಕ್ ಮೇಲೆ ಬಿದ್ದಿದೆ. ಮರ ಬಿದ್ದ ರಭಸಕ್ಕೆ ರಕ್ಷಾಗೆ ತಲೆಗೆ ಗಂಭೀರ ಗಾಯಗಳಾಗಿ, ತೀವ್ರ ರಕ್ತ ಸ್ರಾವವಾಗಿದೆ. ಕೂಡಲೇ ರಕ್ಷಾಳನ್ನು ಮೊದಲು ಸ್ಥಳೀಯ ಆಸ್ಪತ್ರೆಗೆ ಸೇರಿಸಿ ಬಳಿಕ ಬೌರಿಂಗ್ ಆಸ್ಪತ್ರೆಗೆ ಕರೆದುಕೊಂಡು ಹೋಗಿಲಾಗಿದೆ. ಅದ್ರೆ ಚಿಕಿತ್ಸೆ ಫಲಿಸದೆ ಮಗು ಮೃತಪಟ್ಟಿದೆ.
1 Comment