Connect with us

    KARNATAKA

    ಬೆಂಗಳೂರು : ಗಾಂಜಾ ಮಿಶ್ರಿತ ಚಾಕಲೇಟ್ ಮಾರಾಟ -10 ಚೀಲ ಚಾಕಲೇಟುನೊಂದಿಗೆ ಆರೋಪಿ ಸೆರೆ..!

    ಗಾಂಜಾ ಮಿಶ್ರಿತ ಚಾಕಲೇಟ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಆರ್‍ಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಬೆಂಗಳೂರು : ಗಾಂಜಾ ಮಿಶ್ರಿತ ಚಾಕಲೇಟ್ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರು ಆರ್‍ಎಂಸಿ ಯಾರ್ಡ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

    ಆರೋಪಿಯಿಂದ 225 ಕೆ.ಜಿ ಗಾಂಜಾ ಮತ್ತು ಮೊಬೈಲ್ ವಶಪಡಿಸಿಕೊಂಡಿದ್ದಾರೆ.

    ಗಸ್ತಿನಲ್ಲಿದ್ದ ಇನ್‍ಸ್ಪೆಕ್ಟರ್ ಅವರಿಗೆ ದೊರೆತ ಖಚಿತ ಮಾಹಿತಿ ಮೇರೆಗೆ ಲಾರಿ ಸ್ಟ್ಯಾಂಡ್ ಬಳಿ ಬರುತ್ತಿದ್ದ ಆಟೋ ರಿಕ್ಷಾವನ್ನು ತಡೆದು ಪರಿಶೀಲಿಸಿದಾಗ ಆಟೋದಲ್ಲಿ ಚಾಕಲೇಟ್‍ಗಳು ತುಂಬಿದ್ದ 10 ಬಿಳಿ ಚೀಲಗಳಿರುವುದು ಕಂಡುಬಂದಿದೆ.

    ಆರೋಪಿಯನ್ನು ವಿಚಾರಿಸಿದಾಗ ಗಾಂಜಾ ಮಿಶ್ರಿತ ಚಾಕಲೇಟ್ ಮಾರಾಟ ಮಾಡಲು ತೆಗೆದುಕೊಂಡು ಹೋಗುತ್ತಿರುವುದಾಗಿ ತಿಳಿಸಿದ ಮೇರೆಗೆ ಆತನನ್ನು ಮಾಲು ಸಮೇತ ವಶಕ್ಕೆ ಪಡೆದು ಠಾಣೆಗೆ ಕರೆದೊಯ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    ಆರೋಪಿ ಉತ್ತರಪ್ರದೇಶದ ಖಾನಾಪುರದಲ್ಲಿನ ವ್ಯಕ್ತಿಯೊಬ್ಬರಿಂದ ಟ್ರಾನ್ಸ್ ಪೋರ್ಟ್ ಮೂಲಕ ಚಾಕಲೇಟ್ ರೂಪದಲ್ಲಿ ಗಾಂಜಾ ಮಿಶ್ರಿತ ಚಾಕಲೇಟ್‍ಗಳನ್ನು ತರಿಸಿಕೊಂಡು ನಗರದಲ್ಲಿ ಮಾರಾಟ ಮಾಡುತ್ತಿದುದ್ದಾಗಿ ವಿಚಾರಣೆ ವೇಳೆ ಬಾಯ್ಬಿಟ್ಟಿದ್ದಾನೆ.

    ಉತ್ತರ ವಿಭಾಗದ ಉಪಪೊಲೀಸ್ ಆಯುಕ್ತ ಶಿವಪ್ರಕಾಶ್ ದೇವರಾಜು ಅವರ ಮಾರ್ಗದರ್ಶನದಲ್ಲಿ ಪೀಣ್ಯ ಉಪವಿಭಾಗದ ಎಸಿಪಿ ಸದಾನಂದ ಎ.ತಿಪ್ಪಣ್ಣನವರ್, ಇನ್‍ಸ್ಪೆಕ್ಟರ್ ಸುರೇಶ್ ನೇತೃತ್ವದಲ್ಲಿ ಸಿಬ್ಬಂದಿ ತಂಡ ಕಾರ್ಯಾಚರಣೆ ನಡೆಸಿದ್ದು ಪ್ರಕರಣದ ತನಿಖೆ ಪ್ರಗತಿಯಲ್ಲಿದೆ.

    Share Information
    Advertisement
    Click to comment

    You must be logged in to post a comment Login

    Leave a Reply