ಬೆಂಗಳೂರು ಜುಲೈ 19 : ಬೆಂಗಳೂರ ನಗರದಲ್ಲಿ ವಿದ್ವಂಸಕ ಕೃತ್ಯ ವೆಸಗಲು ತಯಾರಾಗುತ್ತಿದ್ದ ಉಗ್ರರನ್ನು ನಗರ ಅಪರಾಧ ವಿಭಾಗ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ಒಬ್ಬ ಜೈಲಿನಲ್ಲಿದ್ದರೆ ಮಾಸ್ಟರ್ ಮೈಂಡ್ ತಲೆಮರೆಸಿಕೊಂಡಿದ್ದಾನೆ.

ಬಂಧಿತರಿಂದ ಏಳು ಪಿಸ್ತೂಲ್ 45 ಮದ್ದು ಗುಂಡುಗಳು, ಹನ್ನೆರಡು ಬೇಸಿಕ್ ಸೆಟ್ ಮೊಬೈಲ್ ಫೋನ್, ಡ್ರ್ಯ್ಯಾಗರ್, ವಾಕಿ ಟಾಕಿ ವಶಕ್ಕೆ ಪಡೆದುಕೊಳ್ಳಲಾಗಿದೆ. ಬಂಧಿತರು ಬೆಂಗಳೂರು ನಗರದಲ್ಲಿ ಕೃತ್ಯವೆಸಗಲು ಪ್ಲ್ಯಾನ್ ಮಾಡಿದ್ದರು. ವಿದೇಶದಿಂದ ವಿಧ್ವಂಸಕ ಕೃತ್ಯ್ಕಕೆ ಹಣವನ್ನು ಸಂಗ್ರಹಿಸುತ್ತಿದ್ದರು ಎಂದು ಇಂಚಿಂಚು ಸುದ್ದಿಗೋಷ್ಠಿಯಲ್ಲಿ ನಗರ ಪೊಲೀಸ್ ಆಯುಕ್ತ ಬಿ ದಯಾನಂದ್ ಬಿಚ್ಚಿಟ್ಟರು. ಅಪಾರ ಪ್ರಮಾಣದ ಸ್ಫೋಟಕಗಳನ್ನು ಸಹ ವಶಪಡಿಸಿಕೊಳ್ಳಲಾಗಿದೆ.

ಬಂಧಿತರು ಸೈಯದ್ ಸುಹೇಲ್, ಉಮರ್, ಜಾನಿದ್, ಮುದಾಸಿರ್ ಮತ್ತು ಜಾಹಿದ್ ಎಂದು ಗುರುತಿಸಲಾಗಿದ್ದು, ಈ ತಂಡ ಬೆಂಗಳೂರಿನಲ್ಲಿ ಸ್ಫೋಟ ನಡೆಸಲು ಯೋಜನೆ ರೂಪಿಸಿತ್ತು ಎಂದು ಶಂಕಿಸಲಾಗಿದೆ.
ಈ ಐವರೂ 2017ರ ಕೊಲೆ ಪ್ರಕರಣದಲ್ಲಿ ಆರೋಪಿಗಳಾಗಿದ್ದು, ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಅವರು ಉಗ್ರರ ಸಂಪರ್ಕಕ್ಕೆ ಬಂದಿದ್ದರು ಎಂದು ತಿಳಿದುಬಂದಿದೆ.ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ನಡೆಸಿ ಅವರನ್ನು ಬಂಧಿಸಲಾಗಿದೆ ಎಂದು ಪೊಲೀಸ್ ಆಯುಕ್ತ ದಯಾನಂದ ಸುದ್ದಿಗಾರರಿಗೆ