Connect with us

    KARNATAKA

    ಭಾರತ್ ಜೋಡೋ ಯಾತ್ರೆಯಲ್ಲಿ ಅಮ್ಮ ಸೋನಿಯಾರ ಶೂ ಲೇಸ್ ಕಟ್ಟಿದ ರಾಹುಲ್ ಗಾಂಧಿ

    ಮಂಡ್ಯ ಅಕ್ಟೋಬರ್ 06: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಕರ್ನಾಟಕದಲ್ಲಿ ಮುಂದುವರೆದಿದ್ದು, ಇಂದು ಭಾರತ್ ಜೋಡೋ ಯಾತ್ರೆಯಲ್ಲಿ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಪಾಲ್ಗೊಳ್ಳುವ ಮೂಲಕ ಧೀರ್ಘ ಸಮಯದ ನಂತರ ಸಾರ್ವಜನಿಕ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡರು.


    ಪಾಂಡವಪುರ ತಾಲ್ಲೂಕಿನಲ್ಲಿ ರಾಹುಲ್ ಗಾಂಧಿ ಅವರೊಂದಿಗೆ ಯಾತ್ರೆಯಲ್ಲಿ ಪಾಲ್ಗೊಂಡ ಸೋನಿಯಾ ಗಾಂಧಿ, ಸ್ಥಳೀಯ ಮುಖಂಡರನ್ನು ಭೇಟಿಯಾಗುತ್ತಾ, ಅವರ ಜೊತೆಯಲ್ಲಿಯೇ ಮಾತನಾಡುತ್ತ ಹೆಜ್ಜೆ ಹಾಕುತ್ತಿದ್ದ ದೃಶ್ಯ ಕಂಡುಬಂದಿತು. ಪಾದಯಾತ್ರೆ ವೇಳೆ ಬಿಚ್ಚು ಹೋಗಿದ್ದ ತಾಯಿ ಸೋನಿಯಾ ಗಾಂಧಿ ಅವರ ಶೂ ಲೇಸ್ ಕಟ್ಟಿದರು.

    ಈ ಚಿತ್ರವನ್ನು ಎಐಸಿಸಿ ಟ್ವಿಟರ್ ಖಾತೆಯಲ್ಲಿ ಹೃದಯದ ಎಮೋಜಿಯೊಂದಿಗೆ ಹಂಚಿಕೊಂಡಿದೆ. ಪಕ್ಷದ ಕಾರ್ಯಕರ್ತರ ಜೈಕಾರ, ಘೋಷಣೆಗಳೊಂದಿಗೆ ರಾಹುಲ್ ಮತ್ತಿತರ ಮುಖಂಡರೊಂದಿಗೆ ಸೋನಿಯಾ ಗಾಂಧಿ ಕೆಲವು ದೂರ ಹೆಜ್ಜೆ ಹಾಕಿದರು.
    3,570 ಕಿಲೋ ಮೀಟರ್ ಉದ್ದದ ಭಾರತ್ ಜೋಡೋ ಯಾತ್ರೆ ಸೆಪ್ಟೆಂಬರ್ 8 ರಂದು ಕನ್ಯಾಕುಮಾರಿಯಿಂದ ಪ್ರಾರಂಭವಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply