Connect with us

    LATEST NEWS

    ಭಾರತ್ ಜೋಡೋ ನ್ಯಾಯ ಯಾತ್ರೆಗೆ ದಿಕ್ಕಾರ ಕೂಗಿದ ಕಾಂಗ್ರೇಸ್ ಕಾರ್ಯಕರ್ತರು…!!

    ಮಂಗಳೂರು ಜನವರಿ 23: ಭಾರತ್ ಜೋಡೋ ನ್ಯಾಯ್ ಯಾತ್ರೆ ಮೇಲೆ ಬಿಜೆಪಿ ಕಾರ್ಯಕರ್ತರ ದಾಳಿ ಖಂಡಿಸಿ ದಕ್ಷಿಣಕನ್ನಡ ಜಿಲ್ಲಾ ಕಾಂಗ್ರೇಸ್ ಸಮಿತಿಯಿಂದ ಮಂಗಳೂರಿನಲ್ಲಿ ಪ್ರತಿಭಟನೆ ನಡೆಸಲಾಯಿತು.ಈ ಪ್ರತಿಭಟನೆಯಲ್ಲಿ ಬಿಜೆಪಿ ವಿರುದ್ದ ಘೋಷಣೆ ಕೂಗುವ ಭರದಲ್ಲಿ ಭಾರತ್ ಜೋಡೋ ನ್ಯಾಯ ಯಾತ್ರೆಗೆ ದಿಕ್ಕಾರ ಕೂಗಿದ ಘಟನೆ ನಡೆದಿದೆ.

    ಅಸ್ಸಾಂನಲ್ಲಿ ಬಿಜೆಪಿ ಕಾರ್ಯಕರ್ತರು ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ನ್ಯಾಯ ಯಾತ್ರೆ ಮೇಲೆ ನಡೆಸಿದ ದಾಳಿಯನ್ನು ಖಂಡಿಸಿ ದಕ್ಷಿಣ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಂಗಳೂರಿನ ಕ್ಲಾಕ್ ಟವರ್ ಎದುರು ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು.

    ಈ ವೇಳೆ ಕೇಂದ್ರ ಬಿಜೆಪಿ ಸರಕಾರದ ವಿರುದ್ದ ಕಾಂಗ್ರೇಸ್ ಕಾರ್ಯಕರ್ತರು ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.  ಈ ವೇಳೆ ಮಾತನಾಡಿದ ಮಾಜಿ ಸಚಿವ ರಮಾನಾಥ ರೈ ಅಸ್ಸಾಂ ಸಿಎಂ ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ ಎಂದರು. ಪ್ರತಿಭಟನೆ ವೇಳೆ ಕಾಂಗ್ರೇಸ್ ಕಾರ್ಯಕರ್ತರು ಬಿಜೆಪಿಗೆ ದಿಕ್ಕಾರ ಕೂಗಿದ್ದು, ದಿಕ್ಕಾರ ಕೂಗೂವ ಭರಾಟೆಯಲ್ಲಿ ವೇಳೆ ರಾಹುಲ್ ಗಾಂಧಿಯವರ ಭಾರತ್ ಜೋಡೋ ನ್ಯಾಯ್ ಯಾತ್ರೆಗೂ ದಿಕ್ಕಾರ ಕೂಗಿದ ಪ್ರಸಂಗ ನಡೆದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply