Connect with us

    LATEST NEWS

    ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಇಒ ಭಾಸ್ಕರ್ ಅಪಘಾತಕ್ಕೆ ಬಲಿ

    ಪುತ್ತೂರು: ಪುತ್ತೂರು ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಭಾಸ್ಕರ್(49)  ಅರವರು ಮಂಗಳೂರಿನಲ್ಲಿ ನಡೆದ ಅಪಘಾತವೊಂದರಲ್ಲಿ ಮೃತಪಟ್ಟಿದ್ದಾರೆ.


    ನೇರಳಕಟ್ಟೆ ಪೆರುವಾಜೆ ಬೀರಕೋಡಿ ನಿವಾಸಿಯಾಗಿರುವ ಭಾಸ್ಕರ್ ಅವರು ಅ.17 ರಂದು ಮಂಗಳೂರಿನಲ್ಲಿ ಬೈಕ್  ನಲ್ಲಿ ಹೋಗುತ್ತಿದ್ದಾಗ ಕಾರೊಂದು ಭಾಸಕರ್ ಅವರು ಚಲಾಯಿಸುತ್ತಿದ್ದ ಬೈಕಿಗೆ ಡಿಕ್ಕಿ ಹೊಡೆದಿತ್ತು.  ತೀವ್ರ ಗಾಯಗೊಂಡ ಭಾಸ್ಕರ್ ಅವರನ್ನು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂಧಿಸದೆ ಇಂದು ಶುಕ್ರವಾರ ಬೆಳಗ್ಗೆ ನಿಧನರಾಗಿದ್ದಾರೆ ಎಂದು ತೀಳಿದು ಬಂದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply