Connect with us

    KARNATAKA

    ಭಟ್ಕಳ – ಮಳೆ ಅಬ್ಬರಕ್ಕೆ ಗುಡ್ಡ ಕುಸಿದು ಮಣ್ಣಿನಡಿ ಸಿಲುಕಿದ ನಾಲ್ವರು…!!

    ಭಟ್ಕಳ ಅಗಸ್ಟ್ 2: ಭಟ್ಕಳದಲ್ಲಿ ರಾತ್ರಿ ಸುರಿದ ಮಳೆಗೆ ಹಲವಾರು ಮನೆಗಳು ಜಲಾವೃತವಾಗಿದ್ದು. ಈ ನಡುವೆ ಮಂಗಳವಾರ ಬೆಳಿಗ್ಗೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದು ಅವಶೇಷಗಳಡಿ ನಾಲ್ವರು ಸಿಲುಕಿಕೊಂಡಿರುವ ಘಟನೆ ತಾಲ್ಲೂಕಿನ ಮುಟ್ಟಳ್ಳಿಯಲ್ಲಿ ನಡೆದಿದೆ.
    ಮನೆಯಲ್ಲಿದ್ದ ನಾರಾಯಣ ನಾಯ್ಕ (48), ಅವರ ಪುತ್ರಿ ಲಕ್ಷ್ಮಿ ನಾಯ್ಕ (33), ಪುತ್ರ ಅನಂತ ನಾರಾಯಣ ನಾಯ್ಕ (32) ಹಾಗೂ ಸಂಬಂಧಿ ಪ್ರವೀಣ ಬಾಲಕೃಷ್ಣ ನಾಯ್ಕ (20) ಮಣ್ಣಿನಲ್ಲಿ ಸಿಲುಕಿಕೊಂಡಿದ್ದಾರೆ.

    ಇನ್ನು ಗುಡ್ಡದ ಮೇಲಿನಿಂದ ಭಾರಿ ಪ್ರಮಾಣದಲ್ಲಿ ಚಿರೆಕಲ್ಲು ಮಿಶ್ರಿತ ಮಣ್ಣು ಮನೆಯ ಮೇಲೆ ಕುಸಿದಿದ್ದು, ಮನೆ ಸಂಪೂರ್ಣ ನಾಶವಾಗಿದ್ದು, ರಕ್ಷಣಾ ಕಾರ್ಯ ಮುಂದುವರೆದಿದೆ.

    Share Information
    Advertisement
    Click to comment

    You must be logged in to post a comment Login

    Leave a Reply