KARNATAKA
ಭಟ್ಕಳ : ಚಲಿಸುತ್ತಿದ್ದ ರೈಲಿಗೆ ಸಿಲುಕಿದ ವ್ಯಕ್ತಿಯನ್ನು ಪಾರು ಮಾಡಿದ ರೈಲ್ವೆ ಸಿಬ್ಬಂದಿ ಯೊಗೇಶ್ ನಾಯ್ಕ್ ಸಾಹಸಕ್ಕೆ ಪ್ರಶಂಸೆಯ ಮಹಾಪೂರ..!
ಭಟ್ಕಳ : ಚಲಿಸುತ್ತಿದ್ದ ರೈಲನ್ನು ಹತ್ತಲು ಹೋಗಿ ಸಿಕ್ಕಿಹಾಕಿಕೊಂಡ ಪ್ರಯಾಣಿಕನೊಬ್ಬನನ್ನು ಸ್ಥಳದಲ್ಲಿದ್ದ ಕೊಂಕಣ ರೈಲ್ವೆ ಸಿಬ್ಬಂದಿ ಹಿಡಿದು ಅಪಾಯದಿಂದ ಪಾರು ಮಾಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಭಟ್ಕಳದಲ್ಲಿ ನಡೆದಿದೆ.
ಭಾನುವಾರ ರಾತ್ರಿ ಈ ಘಟನೆ ನಡೆದಿದ್ದು ರೈಲು ನಿಲ್ದಾಣದ ಸಿಸಿಟಿವಿ ಕ್ಯಾಮೆರಾದಲ್ಲಿ ದೃಶ್ಯ ಸೆರೆಯಾಗಿದೆ. ಗೋವಾದ ಮಡಗಾಂನಿಂದ ಎರ್ನಾಕುಲಂ ಕಡೆಗೆ ಸಾಗುತ್ತಿದ್ದ ರೈಲು ಭಟ್ಕಳದಲ್ಲಿ ನಿಲುಗಡೆಯಾಗಿತ್ತು. ರೈಲು ಪುನಃ ಹೊರಡುವಾಗ ಒಬ್ಬ ಪ್ರಯಾಣಿಕ ರೈಲು ಏರುವಾಗ ಎಡವಿದಂತೆ ತೋರಿತು.
ಇದನ್ನು ಅರಿತ ಕೊಂಕಣ ರೈಲ್ವೆ ಪಾಯಿಂಟ್ಸ್‌ಮನ್ ಮಣ್ಕುಳಿಯ ಯೊಗೇಶ ನಾಯ್ಕ ಓಡಿಬಂದ ಅವರನ್ನು ರೈಲು ಏರಿಸಲು ಪ್ರಯತ್ನಿಸಿದರೂ ಸಾಧ್ಯವಾಗದೇ ಅವರ ಒಂದು ಕಾಲು ರೈಲಿನಿಂದ ಕೆಳಗೆ ಜಾರಿತು. ಇನ್ನೇನು ರೈಲಿನ ಕೆಳಗೆ ಸಿಲುಕುತ್ತಾರೆ ಎನ್ನುವಾಗ ಯೋಗೇಶ ಸಮಯಪ್ರಜ್ಞೆಯಿಂದ ಅವರನ್ನು ಪ್ಲಾಟ್‌ಫಾರಂ ಕಡೆಗೆ ಎಳೆದು ಜೀವ ಉಳಿಸಿದ್ದಾರೆ. ನಂತರ ರೈಲು ನಿಲುಗಡೆಗೆ ಬ್ಯಾಟರಿಯಿಂದ ಸಿಗ್ನಲ್ ತೋರಿಸಿ ಪ್ರಯಾಣಿಕನನ್ನು ಪುನಃ ರೈಲಿಗೆ ಹತ್ತಿಸಿ ಕಳುಹಿಸಿದ್ದಾರೆ.ತಮ್ಮನ್ನು ಪಾರು ಮಾಡಿದ ಯೊಗೇಶ ನಾಯ್ಕ ಅವರಿಗೆ ಪ್ರಯಾಣಿಕ ಧನ್ಯವಾದ ಅರ್ಪಿಸಿ ಪ್ರಯಾಣ ಮುಂದುವರಿಸಿದರೆ ಮಣ್ಕುಳಿಯ ಯೊಗೇಶ ನಾಯ್ಕ ಅವರ ಸಾಹಸಕ್ಕೆ ಮೆಚ್ಚುಗೆ ವ್ಯಕ್ತವಾಗಿದೆ.