Connect with us

FILM

ಭೂತಕೋಲ ಹಿಂದೂ ಸಂಸ್ಕೃತಿಯಲ್ಲ ಎಂದ ನಟ ಚೇತನ್ ಕುಮಾರ್

ಬೆಂಗಳೂರು ಅಕ್ಟೋಬರ್ 19: ರಿಷಬ್ ಶೆಟ್ಟಿ ನಿರ್ದೇಶನದ ಕಾಂತಾರ ಚಿತ್ರ ಇದೀಗ ದೇಶದಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿದೆ. ಕರಾವಳಿಯ ಭೂತಕೋಲದ ಆರಾಧನೆಯನ್ನು ಜನ ಕಣ್ತುಂಬಿಸಿಕೊಳ್ಳುತ್ತಿದ್ದಾರೆ. . ಈ ಮಧ್ಯೆ ಭೂತಕೋಲ ಹಿಂದೂ ಸಂಸ್ಕೃತಿ ಎಂದು ನಿರ್ದೇಶಕ ರಿಷಬ್ ಶೆಟ್ಟಿ ಹೇಳಿಕೆಯನ್ನು ನಟ ಚೇತನ್ ಕುಮಾರ್ ಅಲ್ಲಗಳೆದಿದ್ದಾರೆ.


ಕಾಂತಾರ ಕುರಿತು ಪ್ರತಿಕ್ರಿಯಿಸಿರುವ ನಟ ಚೇತನ್ ಅಹಿಂಸಾ.. ನಮ್ಮ ಕನ್ನಡದ ಚಲನಚಿತ್ರ `ಕಾಂತಾರ’ವು ರಾಷ್ಟ್ರಮಟ್ಟದಲ್ಲಿ ಸದ್ದು ಮಾಡುತ್ತಿರುವುದು ಖುಷಿಯ ಸಂಗತಿ. ಭೂತಕೋಲವು ಹಿಂದೂ ಸಂಸ್ಕೃತಿಗೆ ಸೇರುತ್ತದೆ ಎಂದು ನಿರ್ದೇಶಕ ರಿಷಬ್ ಶೆಟ್ಟಿಯವರು ಹೇಳಿದ್ದಾರೆ.

ಇದು ನಿಜವಲ್ಲ. ನಮ್ಮ ಪಂಬದ/ನಲಿಕೆ/ಪರವರ ಬಹುಜನ ಸಂಪ್ರದಾಯಗಳು, ವೈದಿಕ-ಬ್ರಾಹ್ಮಣ್ಯದ ಹಿಂದೂ ಧರ್ಮಕ್ಕಿಂತ ಹಿಂದಿನಿಂದ ಇರುವವು. ಮೂಲನಿವಾಸಿ ಸಂಸ್ಕೃತಿಗಳನ್ನು ಪರದೆಯ ಮೇಲೆಯಾಗಲಿ, ಅದರಾಚೆಯಾಗಲಿ, ಸತ್ಯ ಸಂಗತಿಗಳೊಂದಿಗೆ ತೋರಿಸಬೇಕೆಂದು ನಾವು ಕೇಳುತ್ತೇವೆ ಎಂದು ತಮ್ಮ ಫೇಸ್‌ಬುಕ್ ಪುಟದಲ್ಲಿ ಬರೆದುಕೊಂಡಿದ್ದಾರೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *