LATEST NEWS
ವಾಣಿಜ್ಯ ಬಳಕೆಯ ಗ್ಯಾಸ್ ಬೆಲೆ ಏರಿಕೆ….103.50ರೂ. ಹೆಚ್ಚಳ!
ನವದೆಹಲಿ ಡಿಸೆಂಬರ್ 1: ಈಗಾಗಲೇ ಬೆಲೆ ಏರಿಕೆಯಿಂದ ಕಂಗೆಟ್ಟಿರುವ ಜನರಿಗೆ ಮತ್ತೆ ಗ್ಯಾಸ್ ಬೆಲೆ ಏರಿಕೆಯಾಗಿದೆ. ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ಡಿಸೆಂಬರ್ 1 ರಿಂದ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ನ ಬೆಲೆಯನ್ನು ಪ್ರತಿ ಸಿಲಿಂಡರ್ಗೆ 103.50 ರೂ.ವರೆಗೆ ಹೆಚ್ಚಿಸಿದೆ.
ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ ಇಂದಿನಿಂದ ಪ್ರತಿ ಸಿಲಿಂಡರ್ ಗೆ 100.50 ರೂ ಹೆಚ್ಚಳವಾಗಿದೆ. ಈ ಮೂಲಕ ಇಲ್ಲಿ ಈಗ ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆ 2101 ರೂ.ಗೆ ಏರಿಕೆಯಾಗಿದೆ.
ಈ ನಡುವೆ ಜನ ಸಾಮಾನ್ಯರು ನಿಟ್ಟುಸಿರು ಬಿಡುವಂತಾಗಿದ್ದು, ಗೃಹಬಳಕೆಯ ಗ್ಯಾಸ್ ಸಿಲಿಂಡರ್ ಬೆಲೆ ಏರಿಕೆಯಾಗಿಲ್ಲ. ಸದ್ಯ ಗೃಹ ಬಳಕೆಯ ದೆಹಲಿಯಲ್ಲಿ 14.2 ಕೆಜಿ ಸಬ್ಸಿಡಿ ರಹಿತ ಎಲ್ಪಿಜಿ ಸಿಲಿಂಡರ್ ಬೆಲೆ 899.50 ರೂ.ನಲ್ಲಿ ಬದಲಾಗದೆ ಉಳಿದಿದೆ.