KARNATAKA
ಪೋಕ್ಸೊ ಪ್ರಕರಣ ಬಿ.ಎಸ್. ಯಡಿಯೂರಪ್ಪಗೆ ಬಿಗ್ ರಿಲೀಫ್, ಬಂಧಿಸದಂತೆ ಪೊಲೀಸರಿಗೆ ಹೈಕೋರ್ಟ್ ಆದೇಶ..!
ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ಆರೋಪದ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಪೀಠ ಮುಂದಿನ ವಿಚಾರಣೆವರೆಗೂ ಬಂಧಿಸದಂತೆ ಪೊಲೀಸ್ ಇಲಾಖೆಗೆ ಆದೇಶಿದೆ. ಆದ್ರೆ ಪೊಲೀಸ್ ವಿಚಾರಣೆಗೆ ಹಾಜರಾಗಲು ಇದೇ ಸಂದರ್ಭದಲ್ಲಿ ಮಾಜಿ ಸಿಎಂ ಗೆ ನ್ಯಾಯಾಲಯ ಸೂಚನೆ ನೀಡಿದೆ.
ಮಾಜಿ ಮುಖ್ಯಮಂತ್ರಿಗಳಾಗಿರುವ ಯಡಿಯೂರಪ್ಪರನ್ನು ಬಂಧಿಸಲು ಸಿದ್ದತೆ ನಡೆಸಿದ್ದ ಪೊಲೀಸರು ಜಾಮೀನು ರಹಿತ ವಾರೆಂಟ್ ಪಡೆದುಕೊಂಡಿದ್ದರು. ಇದರಿಂದ ಬಂಧನ ಭೀತಿ ಎದುರಿಸುತ್ತಿದ್ದ ಯಡಿಯೂರಪ್ಪ ನಿರೀಕ್ಷಣಾ ಜಾಮೀನು ಕೋರಿ ಉಚ್ಚ ನ್ಯಾಯಾಲಯದ ಮೊರೆ ಹೋಗಿದ್ದರು.