Connect with us

    KARNATAKA

    ಹಾಸನ ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಕೇಸಿಗೆ ಬಿಗ್ ಟ್ವಿಸ್ಟ್, ಸಂತ್ರಸ್ತೆಯ ಅತ್ತೆಯಿಂದ ಸ್ಫೋಟಕ ಹೇಳಿಕೆ..!

    ಹಾಸನ : ಸಂಸದ ಪ್ರಜ್ವಲ್ ರೇವಣ್ಣರ ಪೆನ್‌ಡ್ರೈವ್‌ ಕೇಸಿಗೆ ಬಿಗ್ ಟ್ವಿಸ್ಟ್ ಸಿಕ್ಕಿದ್ದು ಪ್ರಜ್ವಲ್ ರೇವಣ್ಣ ಮತ್ತು ಅವರ ತಂದೆ ಎಚ್​ಡಿ ರೇವಣ್ಣ ವಿರುದ್ಧ ದೂರು ನೀಡಿದ್ದ ಸಂತ್ರಸ್ತೆ ಮಹಿಳೆಯ ಅತ್ತೆ ಸ್ಫೋಟಕ ಹೇಳಿಕೆ ನೀಡಿದ್ದಾರೆ.

    ಪ್ರಕರಣ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದಂತೆಯೇ ಇಂದು ಸೋಮವಾರ ಹಾಸನದಲ್ಲಿ ಸುದ್ದಿಗೋಷ್ಠಿ ನಡೆಸಿ, 5 ವರ್ಷದ ಹಿಂದೆ ಸುಮ್ನೆ ಇದ್ದು ಈಗ ದೂರು ನೀಡಿದ್ದಾರೆ. ಭಾವನಿ ಅಮ್ಮ ನಮ್ಮ ಕುಟುಂಬಕ್ಕೆ ತುಂಬಾ ಸಹಾಯ ಮಾಡಿದ್ದಾರೆ. ಅವರು ನಮ್ಮ ಕುಟುಂಬದ ಜೊತೆ ಇದ್ದರು. ಹೆದರಿಸಿ ಇವರನ್ನ ಕಳೆದುಕೊಂಡು ಹೋಗಿ ದೂರು ಕೊಡಿಸಿದ್ದಾರೆ. ನಾವು ಶ್ರೀರಾಮಪುರದಲ್ಲಿ ಜೊತೆ ಒಟ್ಟಿಗೆ ಇದ್ವಿ. ಚುನಾವಣೆ ಸಮಯದಲ್ಲಿ ಗೌಡರ ಮನೆಗೆ ಕಪ್ಪು ಚುಕ್ಕೆ ತರಲು ಈ ಕೆಲಸ ಮಾಡಿದ್ದಾರೆ. ಇದೆಲ್ಲ ಸುಳ್ಳು ದೂರು. ರೇವಣ್ಣ ಕುಟುಂಬ ನಮಗೆ ಸಂಬಂಧಿಕರು ಎಂದು ರೇವಣ್ಣ‌ ,ಪ್ರಜ್ವಲ್ ಪರ ಬ್ಯಾಟಿಂಗ್ ಮಾಡಿದ್ದಾರೆ. ಅಶ್ಲೀಲ ವಿಡಿಯೋ ಸಂಬಂಧ ದೂರು ನೀಡಿರುವ ಮಹಿಳೆ ಸರಿಯಿಲ್ಲ. ತುಂಬಾ ಸಾಲ ಮಾಡಿಕೊಂಡಿದ್ದರು, ಜಮೀನು ಸಹ ಮಾರಾಟ ಮಾಡಿದ್ರು ಹೆಚ್‌.ಡಿ.ದೇವೇಗೌಡ ಕುಟುಂಬಕ್ಕೆ ಕಪ್ಪುಚುಕ್ಕೆ ತರಲು ದೂರು ನೀಡಿದ್ದಾರೆ. ಕೆಟ್ಟ ಹೆಸರು ತರಲು ಈ ಕೆಲಸ ಮಾಡುತ್ತಿದ್ದಾರೆ. ನಮ್ಮನೆಯಿಂದ ಗೌಡರ ಕುಟುಂಬಕ್ಕೆ ಕೆಟ್ಟ ಹೆಸರು ಬರಬಾರದು. ಅ ಮಹಿಳೆ ಸುಳ್ಳು ಹೇಳುತ್ತಿದ್ದಾರೆ. ಮಂಜುನಾಥ ಸ್ವಾಮಿ ಮೇಲೆ ಪ್ರಮಾಣ ಮಾಡುತ್ತೇವೆ ಗೌಡರ ಕುಟುಂಬ ತಪ್ಪು ಮಾಡಿಲ್ಲ. ನಮ್ಮ ಕಷ್ಟ-ಸುಖವನ್ನ ಭವಾನಿ ಅಮ್ಮಾ ನೋಡಿದ್ದಾರೆ. ದೂರುದಾರರ ನಡೆತೆ ಕೂಡ ಸರಿ ಇರಲಿಲ್ಲ. ಅವರಿಗೆ ಯಾವ ದೌರ್ಜನ್ಯ ಆಗಿಲ್ಲ ಎಂದಿದ್ದಾರೆ.ಮೇಡಂ, ಸಾಹೇಬ್ರು ನಮಗೆ ದೇವರಿದ್ದಂತೆ. ವಿಡಿಯೋ ಸತ್ಯದ ಬಗ್ಗೆ ಪ್ರಶ್ನಿಸಿದ ದೂರುದಾರರ ವಿರುದ್ಧದವರು ಟೆಕ್ನಾಲಜಿ ಬಳಸಿ ಏನು ಬೇಕಾದ್ರು ಮಾಡಿರಬಹುದು. ಆಕೆ ಐದು ವರ್ಷದ ಹಿಂದೆಯೇ ಮನೆ ಬಿಟ್ಟಿದ್ದಾಳೆ. ಇಂದು ಏಕೆ ಅವರ ವಿರುದ್ಧ ಮಾತನಾಡುತ್ತಿದ್ದಾರೆ. ಹೆಣ್ಣಾದವಳು 5 ವರ್ಷದ ಹಿಂದೆಯೇ ಹೇಳಬೇಕಿತ್ತು ಎಂದು ದೂರುದಾರ ಸಂತ್ರಸ್ತೆ ವಿರುದ್ಧವೇ ಕುಟುಂಬಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

    ಇದನ್ನೂ ಓದಿ..

    ಪೆನ್ ಡ್ರೈವ್ ಸದ್ದು, ಲೈಂಗಿಕ ದೌರ್ಜನ್ಯ ಆರೋಪದ ಸಂಸದ ಪ್ರಜ್ವಲ್​ ರೇವಣ್ಣ JDS ​ನಿಂದ ಔಟ್..!

    Share Information
    Advertisement
    Click to comment

    You must be logged in to post a comment Login

    Leave a Reply