ಬೆಂಗಳೂರು ನವೆಂಬರ್ 03: ಬಿಗ್ ಬಾಸ್ ಕನ್ನಡ ಸೀಸನ್ 12 ಪ್ರಾರಂಭದಿಂದಲೂ ವಿವಾದದಿಂದಲೇ ಸುದ್ದಿಯಾಗುತ್ತಿದೆ. ಬಿಗ್ ಬಾಸ್ ಮನೆಯಲ್ಲಿ ಬರೀ ಗಲಾಟೆಯಿಂದಲೇ ಸುದ್ದಿಯಾಗಿತ್ತು, ಇದೀಗ ಮಹಿಳಾ ಸ್ಪರ್ಧಿಯೊಬ್ಬಳು ಪುರುಷ ಸ್ಪರ್ಧಿಗೆ ಹಲ್ಲೆ ಮಾಡಿದ್ದಾಳೆ.


ಬಿಗ್ ಬಾಸ್ ಸ್ಪರ್ಧಿ ಗಿಲ್ಲಿ ಮೇಲೆ ರಿಷಾ ಅವರು ಕೈ ಮಾಡಿದ್ದಾರೆ. ರಿಷಾ ಅವರ ಬಳಿ ಬಕೆಟ್ ಕೊಡುವಂತೆ ಗಿಲ್ಲಿ ಅವರು ಬಾತ್​ರೂಂನಲ್ಲಿ ಮನವಿ ಮಾಡಿದ್ದಾರೆ. ಆದರೆ, ರಿಷಾ ಇದಕ್ಕೆ ಬಗ್ಗಲಿಲ್ಲ. ಏನು ಮಾಡಬೇಕು ಎಂಬುದು ನನಗೆ ಗೊತ್ತಿದೆ ಎಂದು ಹೊರಟ ಗಿಲ್ಲಿ ಅವರು, ರಿಷಾ ಅವರ ಬಟ್ಟೆಯನ್ನು ತಂದು ಬಾತ್​ರೂಂ ಹೊರ ಭಾಗದಲ್ಲಿರುವ ನೆಲದ ಮೇಲೆ ಹಾಕಿದ್ದಾರೆ. ಇದು ರಿಷಾ ಕೋಪಕ್ಕೆ ಕಾರಣ ಆಗಿದೆ. ‘ಗಿಲ್ಲಿ’ ಎಂದು ಕೂಗುತ್ತಾ ಬಂದ ಅವರು, ಗಿಲ್ಲಿಗೆ ಹೊಡೆದಿದ್ದಾರೆ.


ಇಷ್ಟಕ್ಕೆ ರಿಷಾ ನಿಲ್ಲಲಿಲ್ಲ. ರಿಷಾ ಅವರು ಗಿಲ್ಲಿ ಮೇಲೆ ಕೂಗಾಡಿದ್ದಾರೆ. ಗಿಲ್ಲಿ ಬಟ್ಟೆಗಳನ್ನೆಲ್ಲ ಎತ್ತಿ ಬೀಸಾಕಿದ್ದಾರೆ. ಸೂಟ್​ಕೇಸ್​ನ ಒದ್ದಿದ್ದಾರೆ ಆ ಬಳಿಕ ಗಿಲ್ಲಿಯನ್ನು ತಳ್ಳಿದ್ದಾರೆ. ರಿಷಾ ಮಾಡಿದ್ದು ಬಿಗ್ ಬಾಸ್ ಮೂಲ ನಿಯಮಗಳಿಗೆ ವಿರುದ್ಧವಾಗಿದೆ. ಕಳೆದ ಸೀಸನ್​ಗಳಲ್ಲಿ ಈ ರೀತಿ ಮಾಡಿದಾಗ ತಕ್ಷಣವೇ ಅವರನ್ನು ದೊಡ್ಮನೆಯಿಂದ ಹೊರಕ್ಕೆ ಹಾಕಲಾಗಿತ್ತು. ಈ ಬಾರಿಯೂ ಅದೇ ರೀತಿ ಮಾಡಲಾಗುತ್ತದೆಯೇ ಎನ್ನುವ ಪ್ರಶ್ನೆ ಮೂಡಿದೆ.

Share Information