FILM
ಸೆಪ್ಟೆಂಬರ್ 29 ರಿಂದ ಬಿಗ್ ಬಾಸ್ 11 – ಕಿಚ್ಚ ಸುದೀಪ್ ಬದಲಾವಣೆ ಇಲ್ಲ ಹೊಸ ಅಧ್ಯಾಯ ಅಷ್ಟೇ..!!
ಬೆಂಗಳೂರು ಸೆಪ್ಟೆಂಬರ್ 15: ಸಿನೆಮಾಗಳಿಗೆ ಸಮಯ ನೀಡಲು ಆಗುತ್ತಿಲ್ಲ ಎಂದು ಬಿಗ್ ಬಾಸ್ ನಿರೂಪಣೆಗೆ ಗುಡ್ ಬೈ ಹೇಳಲು ಹೊರಟ್ಟಿದ್ದ ಸುದೀಪ್ ಇದೀಗ ಮತ್ತೆ ಬಿಗ್ ಬಾಸ್ ಸೀಸನ್ 11 ರಲ್ಲಿ ನಿರೂಪಕರಾಗಿದ್ದಾರೆ.
ಕನ್ನಡ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಆಗಿರುವ ಬಿಗ್ ಬಾಸ್ ನಲ್ಲಿ ಈ ಬಾರಿ ಬದಲಾವಣೆ ಆಗುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಈ ಸೀಸನ್ನಲ್ಲಿ ಆ್ಯಂಕರ್ ಬದಲಾಗುತ್ತಾರಾ ಎಂಬ ಅನುಮಾನಕ್ಕೂ ತೆರೆ ಬಿದ್ದಿದೆ. ‘ಬಿಗ್ ಬಾಸ್ ಕನ್ನಡ ಸೀಸನ್ 11’ ಕಾರ್ಯಕ್ರಮ ಸೆಪ್ಟೆಂಬರ್ 29ರಿಂದ ಆರಂಭ ಆಗಲಿದೆ. ಈ ಬಾರಿ ಕೂಡ ಕಿಚ್ಚ ಸುದೀಪ್ ಅವರೇ ಆ್ಯಂಕರ್ ಆಗಿ ಮುಂದುವರಿಯಲಿದ್ದಾರೆ. ಈ ಬಗ್ಗೆ ಅಪ್ಡೇಟ್ ನೀಡಲು ‘ಕಲರ್ಸ್ ಕನ್ನಡ’ ಟಿವಿಯಲ್ಲಿ ಹೊಸ ಪ್ರೋಮೋ ಬಿಡುಗಡೆ ಮಾಡಲಾಗಿದೆ. ಇದರಲ್ಲಿ ಕಿಚ್ಚ ಸುದೀಪ್ ಅವರು ಅಬ್ಬರಿಸಿದ್ದಾರೆ.
ಪ್ರತಿ ವರ್ಷದಂತೆ ಈ ವರ್ಷ ಕೂಡ ಈಗಾಗಲೇ ಅನೇಕ ವ್ಯಕ್ತಿಗಳ ಹೆಸರು ಕೇಳಿಬರುತ್ತಿದೆ. ಈ ಬಾರಿ ಯಾರೆಲ್ಲ ಬಿಗ್ ಬಾಸ್ ಮನೆಯೊಳಗೆ ಕಾಲಿಡುತ್ತಾರೆ ಎಂಬುದನ್ನು ತಿಳಿಯುವ ಕೌತುಕ ನಿರ್ಮಾಣ ಆಗಿದೆ. ಸಿನಿಮಾ ಸೆಲೆಬ್ರಿಟಿಗಳು, ಕಿರುತೆರೆಯಲ್ಲಿ ಖ್ಯಾತಿ ಗಳಿಸಿದವರು, ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡಿದವರು, ಪತ್ರಿಕೋದ್ಯಮದ ಖ್ಯಾತನಾಮರು.. ಹೀಗೆ ವಿವಿಧ ಕ್ಷೇತ್ರಗಳಿಂದ ಸ್ಪರ್ಧಿಗಳು ಬರಲಿದ್ದಾರೆ. ‘
You must be logged in to post a comment Login