Connect with us

    LATEST NEWS

    ಬಿಹಾರ – ಭೀಕರ ರಸ್ತೆ ಅಪಘಾತಕ್ಕೆ 9 ಮಂದಿ ಬಲಿ

    ಕೈಮೂರ್‌ ಫೆಬ್ರವರಿ 26: ಟ್ರಕ್ ಜೀಪ್ ಮತ್ತು ಬೈಕ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ 9 ಮಂದಿ ಸಾವನಪ್ಪಿದ ಘಟನೆ ಬಿಹಾರದ ಕೈಮೂರ್‌ ಜಿಲ್ಲೆಯಲ್ಲಿ ಭಾನುವಾರ ಸಂಜೆ ನಡೆದಿದೆ.


    ಮೊಹಾನಿಯಾ ಪೊಲೀಸ್‌ ಠಾಣೆ ವ್ಯಾಪ್ತಿಯ ದೇವಕಾಲಿ ಗ್ರಾಮದ ಬಳಿಯ ಜಿಟಿ ರಸ್ತೆಯಲ್ಲಿ ಘಟನೆ ಸಂಭವಿಸಿದೆ. ಮಾಹಿತಿಗಳ ಪ್ರಕಾರ ಇಬ್ಬರು ಮಹಿಳೆಯರು ಸೇರಿದಂತೆ ಎಂಟು ಜನರನ್ನು ಹೊತ್ತೊಯ್ಯುತ್ತಿದ್ದ ಜೀಪ್‌, ಚಾಲಕನ ನಿಯಂತ್ರಣ ತಪ್ಪಿ ಅದೇ ದಿಕ್ಕಿನಲ್ಲಿ ಚಲಿಸುತ್ತಿದ್ದ ಬೈಕ್‌ಗೆ ಮೊದಲು ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಜೀಪ್‌ ಮತ್ತು ಬೈಕ್‌ ಎರಡೂ ಪಕ್ಕದ ರಸ್ತೆಗೆ ದೂಡಲ್ಪಟ್ಟಿವೆ.

    ನಂತರ, ವೇಗವಾಗಿ ಬಂದ ಟ್ರಕ್‌ ಅವುಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ, ಬೈಕ್‌ ಸವಾರ ಸೇರಿದಂತೆ ಎಲ್ಲಾ ಒಂಬತ್ತು ಮಂದಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ’ ಎಂದು ಉಪ ಪೊಲೀಸ್ ವರಿಷ್ಠಾಧಿಕಾರಿ ದಿಲೀಪ್‌ ಕುಮಾರ್‌ ಸುದ್ದಿಗಾರರಿಗೆ ತಿಳಿಸಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply