Connect with us

LATEST NEWS

ಜಡೆ ಹಿಡಿದು ಹೊಡೆದಾಡಿಕೊಂಡ ಇಬ್ಬರು ಶಿಕ್ಷಕಿಯರು – ವಿಡಿಯೋ ವೈರಲ್

Share Information

ಪಾಟ್ನಾ ಮೇ 26: ಇಬ್ಬರು ಶಿಕ್ಷಕಿಯರು ಹಾಡು ಹಗಲೇ ಹೊಡೆದಾಡಿಕೊಂಡ ಘಟನೆ ಬಿಹಾರದ ಪಾಟ್ನಾದಲ್ಲಿ ನಡೆದಿದ್ದು, ಇದೀಗ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಕೌರಿಯಾ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಬಿಹ್ತಾ ಮಾಧ್ಯಮಿಕ ಶಾಲೆಯಲ್ಲಿ ಈ ಘಟನೆ ನಡೆದಿದೆ. ಶಾಲಾ ಮುಖ್ಯ ಶಿಕ್ಷಕಿ ಕಾಂತಿ ಕುಮಾರಿ ಮತ್ತು ಶಿಕ್ಷಕಿ ಅನಿತಾ ಕುಮಾರಿ ನಡುವೆ ಈ ಗಲಾಟೆ ನಡೆದಿದೆ. ಸದ್ಯ ಜಗಳದ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಶಾಲೆಯ ಇಬ್ಬರು ಶಿಕ್ಷಕಿಯರು ಪರಸ್ಪರ ಜಗಳವಾಡುತ್ತಿದ್ದರೆ, ಶಾಲಾ ಮಕ್ಕಳು ಮೂಕ ಪ್ರೇಕ್ಷಕರಂತೆ ಜಗಳ ವೀಕ್ಷಿಸುತ್ತಿದ್ದಾರೆ. ಅಲ್ಲದೆ ಶಾಲೆಯ ಒಳಗೆ ಆರಂಭವಾದ ಗಲಾಟೆ ಹೊರಗಿನ ಮೈದಾನದವರೆಗೂ ತಲುಪಿದೆ. ಕೆಳಗೆ ಬಿದ್ದುಕೊಂಡು ಮಣ್ಣಿನಲ್ಲೇ ಇಬ್ಬರು ಒದ್ದಾಡುತ್ತಾ ಗುದ್ದಾಡುತ್ತಿರುವುದನ್ನು ನಾವು ವೀಡಿಯೋದಲ್ಲಿ ಕಾಣಬಹುದಾಗಿದೆ. ತರಗತಿಯಿಂದ ಒಬ್ಬರು ಹೊರಗೆ ಹೋಗುತ್ತಿರುವಾಗ ಮತ್ತೊಬ್ಬರು ಚಪ್ಪಲಿ ಹಿಡಿದುಕೊಂಡು ಓಡಿ ಬಂದು ಹೊಡೆದಾಗ ಜಗಳ ತೀವ್ರ ಸ್ವರೂಪ ಪಡೆದುಕೊಂಡಿತು. ಈ ವೇಳೆ ಮತ್ತೊಬ್ಬ ಮಹಿಳೆಯು ಕೂಡ ಹೊಡೆದಿದ್ದಾರೆ.

 


Share Information
Advertisement
Click to comment

You must be logged in to post a comment Login

Leave a Reply