LATEST NEWS
ಮುಡಿಪು – ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವು
![](https://i0.wp.com/themangaloremirror.in/wp-content/uploads/2024/04/For-Advertisement-Please-Contact-1.jpg?fit=728%2C90&ssl=1)
ಮಂಗಳೂರು ಫೆಬ್ರವರಿ 13: ನಿನ್ನೆ ರಾತ್ರಿ ಬೋಳಿಯಾರಿನಲ್ಲಿ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.
ಮೃತರನ್ನು ಮಂಜೇಶ್ವರ ತಾಲೂಕು ವರ್ಕಾಡಿ ಗ್ರಾಮದ ನಲೆಂಗಿ ನಿವಾಸಿ ರೋಷನ್ ಮೋರಸ್ (34) ಎಂದು ಗುರುತಿಸಲಾಗಿದೆ. ವೃತ್ತಿಯಲ್ಲಿ ಎಲೆಕ್ಟ್ರೀಷಿಯನ್ ಆಗಿರುವ ರೋಷನ್ ಕಾರ್ಯಕ್ರಮವೊಂದನ್ನು ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಬೋಳಿಯಾರಿನಲ್ಲಿ ನಿಯಂತ್ರಣ ತಪ್ಪಿದ ಬೈಕ್ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ರೋಷನ್ ಅವರ ತಲೆಗೆ ಗಂಭೀರ ಗಾಯವಾಗಿದ್ದು ಸ್ಥಳೀಯರು ತಕ್ಷಣ ಮಂಗಳೂರಿನ ಪಡೀಲಿನ ಫಸ್ಟ್ ನ್ಯೂರೋ ಆಸ್ಪತ್ರೆಗೆ ದಾಖಲಿಸಿದ್ದರು. ಅಲ್ಲಿಂದ ಮತ್ತೆ ರೋಷನ್ ಅವರನ್ನು ವೆನ್ ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಸಂಜೆ ಸಾವನ್ನಪ್ಪಿದ್ದಾರೆ.
![](https://i0.wp.com/themangaloremirror.in/wp-content/uploads/2024/06/IMG-20240626-WA0023.jpg?fit=1280%2C670&ssl=1)
ರೋಷನ್ ಅವರಿಗೆ ಮದುವೆ ಆಗಿ ನಾಲ್ಕು ವರ್ಷಗಳಾಗಿದ್ದು ಐದು ತಿಂಗಳ ಹೆಣ್ಣು ಮಗುವಿದೆ. ಮೃತ ರೋಷನ್ ಪತ್ನಿ, ಹೆಣ್ಣು ಮಗುವನ್ನು ಅಗಲಿದ್ದಾರೆ. ಮಂಗಳೂರು ದಕ್ಷಿಣ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
1 Comment