PUTTUR
ಕಡಬ : ಬೈಕ್ ಡಿಕ್ಕಿ ಗಂಭೀರಗಾಯಗೊಂಡಿದ್ದ ಸವಾರ ಸಾವು

ಕಡಬ ಜೂನ್ 23: ನಿನ್ನೆ ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯಲ್ಲಿ ಬೈಕ್ ಗಳ ನಡುವೆ ನಡೆದ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ.
ಸುಬ್ರಹ್ಮಣ್ಯ – ಧರ್ಮಸ್ಥಳ ರಾಜ್ಯ ಹೆದ್ದಾರಿಯ ಮರ್ಧಾಳದ ಕೋಡಂದೂರು ಎಂಬಲ್ಲಿ ನಿನ್ನೆ ಬೆಳಿಗ್ಗೆ ಬೈಕ್ ಗಳ ನಡುವೆ ಢಿಕ್ಕಿ ಸಂಭವಿಸಿತ್ತು.ಇದರಲ್ಲಿ ಗಂಭೀರ ಗಾಯಗೊಂಡಿದ್ದ ಕಡಬ ತಾಲೂಕು ಬಂಟ್ರ ಗ್ರಾಮದ ಪಣೆಬೈಲು ನಿವಾಸಿ ಯತೀಂದ್ರ ರೈ ಎಂಬವರ ಪುತ್ರ ಪ್ರಮೋದ್ ರೈ ಎಂಬವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಾಯಾಳು ಪ್ರಮೋದ್ ರವರು ತಡರಾತ್ರಿ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
