Connect with us

LATEST NEWS

ರಸ್ತೆ ಬದಿ ನಿಂತಿದ್ದ ತಂದೆ ಮಗನಿಗೆ ಡಿಕ್ಕಿ ಹೊಡೆದ ಬೈಕ್….!!

ಕುಂದಾಪುರ ಸೆಪ್ಟೆಂಬರ್ 22: ರಸ್ತೆ ಬದಿ ನಿಂತಿದ್ದ ತಂದೆ ಮಗನಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ತಂದೆ ಸಾವನಪ್ಪಿ ಮಗ ಗಂಭೀರವಾಗಿ ಗಾಯಗೊಂಡ ಘಟನೆ ಶಿರ್ವ ಪೊಲೀಸ್ ಠಾಣಾ ವ್ಯಾಪ್ತಿಯ ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್‌ ಬಳಿ ನಡೆದಿದೆ.
ಮೃತರನ್ನು ಬಾಗಲಕೋಟೆ ಮೂಲದ ಶರಣಪ್ಪ ಬಾಲಪ್ಪ ಗಂಜಿಹಾಳ(40) ಎಂದು ಗುರುತಿಸಲಾಗಿದ್ದು.ಅವರ ಮಗಶ್ರವಣ ಕುಮಾರ(6) ಗಂಭೀರವಾಗಿ ಗಾಯಗೊಂಡಿದ್ದಾರೆ.


ಬುಧವಾರ ರಾತ್ರಿ 7 ಗಂಟೆ ಸುಮಾರಿಗೆ ಶರಣಪ್ಪ ಅವರು ತನ್ನ ಪುತ್ರ ಶ್ರವಣಕುಮಾರನೊಂದಿಗೆ ದಿನಸಿ ತರಲು ಬಂಟಕಲ್ಲು ಪೇಟೆಯ ಆಶಾ ಕಾಂಪ್ಲೆಕ್ಸ್‌ನ ಎದುರುಗಡೆ ರಸ್ತೆ ಬದಿಯಲ್ಲಿ ನಿಂತಿರುವಾಗ ಶಂಕರಪುರ ಕಡೆಯಿಂದ ವೇಗವಾಗಿ ಬಂದ ಬೈಕ್‌ ಸವಾರ ಢಿಕ್ಕಿ ಹೊಡೆದು ಬೈಕನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ.

ಇನ್ನು ಢಿಕ್ಕಿ ಹೊಡೆದ ರಭಸಕ್ಕೆ ರಸ್ತೆಗೆ ಬಿದ್ದು ಗಂಭೀರ ಗಾಯಗೊಂಡ ಇಬ್ಬರನ್ನೂ ಸಾರ್ವಜನಿಕರು ಸೇರಿ ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು. ತಲೆಗೆ ಗಂಭೀರ ಗಾಯಗೊಂಡು ಒಳರೋಗಿಯಾಗಿ ಚಿಕಿತ್ಸೆಗೆ ದಾಖಲಾದ ಶರಣಪ್ಪ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ ಮೃತಪಟ್ಟಿದ್ದಾರೆ. ಈ ಬಗ್ಗೆ ಶಿರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Advertisement
Click to comment

You must be logged in to post a comment Login

Leave a Reply