BELTHANGADI
ಎರಡು ದಿನ ಅಂತರದಲ್ಲಿ ಒಂದೇ ಕಾಲೇಜಿನ ಇಬ್ಬರು ವಿಧ್ಯಾರ್ಥಿಗಳು ಅಪಘಾತಕ್ಕೆ ಬಲಿ
ಬೆಳ್ತಂಗಡಿ ನವೆಂಬರ್ 25: ಆಟೋ ರಿಕ್ಷಾಕ್ಕೆ ದ್ವಿಚಕ್ರ ವಾಹನ ಡಿಕ್ಕಿಯಾದ ಪರಿಣಾಮ ವಿಧ್ಯಾರ್ಥಿಯೊಬ್ಬ ಸಾವನಪ್ಪಿರುವ ಘಟನೆ ಮಡಂತ್ಯಾರಿನಲ್ಲಿ ನಡೆದಿದೆ.
ಮಡಂತ್ಯಾರು ಸೆಕ್ರೆಡ್ ಹಾರ್ಟ್ ಕಾಲೇಜಿನ ದ್ವಿತೀಯ ಬಿ. ಕಾಂ ವಿದ್ಯಾರ್ಥಿ, ಕೊಡ್ಲಕ್ಕಿ ನಿವಾಸಿ ಹರ್ಷಿತ್ (20) ಅಪಘಾತದಲ್ಲಿ ಸಾವನಪ್ಪಿರುವ ವಿಧ್ಯಾರ್ಥಿ. ಈತ ಸಂಜೆ ಕಾಲೇಜು ಮುಗಿಸಿ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿರುವ ಸಂದರ್ಭ ಬಳ್ಳಮಂಜ ರಸ್ತೆಯ ಬಂಗೇರಕಟ್ಟೆ ಎಂಬಲ್ಲಿ ಆಟೋ ರಿಕ್ಷಾಕ್ಕೆ ಢಿಕ್ಕಿಯಾಗಿ ಗಂಭೀರ ಗಾಯಗೊಂಡಿದ್ದರು. ತಕ್ಷಣ ಅವರನ್ನು ಸ್ಥಳೀಯರು ಮಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಿ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಹರ್ಷಿತ್ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.
ಎರಡು ದಿನದಲ್ಲಿ ಒಂದೇ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳು ಅಪಘಾತದಿಂದ ಮೃತಪಟ್ಟಿರುವ ವಿಚಾರ ಎಲ್ಲರನ್ನೂ ಚಿಂತೆಗೊಳಪಡಿಸಿದೆ. ಈ ಬಗ್ಗೆ ಪುಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
You must be logged in to post a comment Login