Connect with us

    DAKSHINA KANNADA

    ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮನೋಜ್ ನಿಧನ

    ವಿಟ್ಲ ಡಿಸೆಂಬರ್ 4: ಬೈಕ್ ಹಾಗೂ ಟಿಪ್ಪರ್ ಲಾರಿ ನಡುವೆ ನಡೆದ ಬೀಕರ ರಸ್ತೆ ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ್ದಾರೆ.


    ಮೃತರನ್ನು ಮಾಣಿಲ ನಿವಾಸಿ ಮನೋಜ್ ಪೂಜಾರಿ ಎಂದು ಗುರುತಿಸಲಾಗಿದೆ. ಮೃತರು ಅಮರ್‌ ಕನ್ಸ್ ಸ್ಟ್ರೆಕ್ಷನ್ ನಲ್ಲಿ ಸಿವಿಲ್ ಇಂಜಿನಿಯರ್ ಆಗಿ ಕೆಲಸ ನಿರ್ವಹಿಸುತ್ತಿದ್ದರು. ವಿಟ್ಲ ಕಡೆಯಿಂದ ಬಂದ ಟಿಪ್ಪರ್ ಲಾರಿ ಬೇರೊಂದು ವಾಹನವನ್ನು ಓವರ್ ಟೆಕ್ ಮಾಡುವ ಭರದಲ್ಲಿ ವೀರಕಂಭ ಗ್ರಾಮದ ಮಜಿ ಶಾಲಾ ಮುಂಭಾಗದಲ್ಲಿ ಬೈಕ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಮನೋಜ್ ರಸ್ತೆಗೆಸೆಯಲ್ಪಟ್ಟಿದ್ದರು,ಅವರನ್ನು ಸ್ಥಳೀಯರು ಕೂಡಲೇ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದರು.


    ಆದರೆ ಅಲ್ಲಿ ಚಿಕಿತ್ಸೆಗೆ ಸ್ಪಂದಿಸದೆ ಮನೋಜ್ ಇಂದು ಮೃತಪಟ್ಟಿದ್ದಾರೆ. ಈ ಅಪಘಾತ ನಡೆದ ವೇಳೆ ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಪ್ರೇಮನಾಥ ಎಂಬವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು ಅಪಾಯದಿಂದ ಪಾರಾಗಿದ್ದಾರೆ. ಈ ಬಗ್ಗೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

    Share Information
    Advertisement
    Click to comment

    You must be logged in to post a comment Login

    Leave a Reply