Connect with us

LATEST NEWS

ಕಾಪು ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರ ಸ್ಥಳದಲ್ಲೇ ಸಾವು

ಕಾಪು ಬಳಿ ಡಿವೈಡರ್ ಗೆ ಡಿಕ್ಕಿ ಹೊಡೆದ ಬೈಕ್ ಸವಾರ ಸ್ಥಳದಲ್ಲೇ ಸಾವು

ಉಡುಪಿ ಜೂನ್ 7: ನಿಯಂತ್ರಣ ತಪ್ಪಿ ಡಿವೈಡರ್ ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ನಡೆದಿದೆ.

ರಾಷ್ಟ್ರೀಯ ಹೆದ್ದಾರಿ 66 ರ ಕಾಪುವಿನ ಮಯೂರ್ ಹೋಟೆಲ್ ಮುಂಬಾಗ ಈ ಘಟನೆ ನಡೆದಿದೆ. ಮೃತಪಟ್ಟ ಯುವಕ ಚಿಕ್ಕಮಗಳೂರು ಮೂಲದವನು ಎಂದು ಗುರುತಿಸಲಾಗಿದೆ.

ಮಂಗಳೂರು ಕಡೆಗೆ ತೆರಳುತ್ತಿದ್ದ ಸಂದರ್ಭ ಬೈಕ್ ನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಡಿಕ್ಕಿ ಹೊಡೆದಿದೆ. ಡಿಕ್ಕಿ ರಭಸಕ್ಕೆ ಬೈಕ್ ಸವಾರ ಸ್ಥಳದಲ್ಲೇ‌ ಸಾವನಪ್ಪಿದ್ದಾನೆ. ಅಪಘಾತದ ದೃಶ್ಯಾವಳಿ ಸಿಸಿಟಿವಿಯಲ್ಲಿ‌ ಸೆರೆಯಾಗಿದೆ. ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ‌ ದಾಖಲಾಗಿದೆ.

VIDEO

Facebook Comments

comments