LATEST NEWS
ಬೈಕ್ ಗಳ ನಡುವೆ ಅಪಘಾತ – ಓರ್ವ ಸಾವು ಇನ್ನೊಬ್ಬ ಗಂಭೀರ…!!

ಮೂಡುಬಿದಿರೆ ಎಪ್ರಿಲ್ 4: ಎರಡು ಬೈಕ್ ಗಳ ನಡುವೆ ನಡೆದ ಮುಖಾಮುಖಿ ಢಿಕ್ಕಿಯಲ್ಲಿ ಓರ್ವ ಸವಾರ ಸ್ಥಳದಲ್ಲೇ ಸಾವನಪ್ಪಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ಘಟನೆ ಮೂಡುಬಿದಿರೆ ಸಮೀಪದ ಕೊಡಂಗಲ್ಲುವಿನಲ್ಲಿ ಎಂಬಲ್ಲಿ ನಡೆದಿದೆ.
ಮೃತರನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಪೆರಿಂಜೆ ಸಮೀಪದ ಎದುರುಗುಡ್ಡೆ ನಿವಾಸಿ ರವೀಂದ್ರ ಪೂಜಾರಿ (35) ಎಂದು ಗುರುತಿಸಲಾಗಿದ್ದು, ದ್ವಿಚಕ್ರ ವಾಹನದ ಹಿಂಬದಿಯಲ್ಲಿದ್ದ ಸಹೋದರ ರಾಜೇಂದ್ರ ಪೂಜಾರಿ ಗಾಯಗೊಂಡಿದ್ದು, ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮನೆಯಲ್ಲಿ ಪರೊಟಾ ತಯಾರಿಸಿ ಅಂಗಡಿ-ಹೊಟೇಲ್‌ಗಳಿಗೆ ಮಾರಾಟ ಮಾಡುತ್ತಿದ್ದ ಇವರು ಇಂದು ಮೂಡುಬಿದಿರೆ ಕಡೆಗೆ ತನ್ನ ದ್ವಿಚಕ್ರ ವಾಹನದಲ್ಲಿ ಸಹೋದರನೊಂದಿಗೆ ತೆರಳುತ್ತಿದ್ದ ವೇಳೆ ಕೊಡಂಗಲ್ಲು ಸಮೀಪ ಎದುರುಗಡೆಯಿಂದ ಬಂದ ಇಂಜಿನಿಯರಿಂಗ್ ವಿದ್ಯಾರ್ಥಿ ಜಸ್ಟಿನ್ ಮಿನೇಝಸ್ ಎಂಬವರು ಚಲಾಯಿಸುತ್ತಿದ್ದ ಬೈಕ್ ಢಿಕ್ಕಿ ಹೊಡೆದಿದೆ ಎನ್ನಲಾಗಿದೆ.