DAKSHINA KANNADA
ಬೈಕ್ ಅಪಘಾತಕ್ಕೆ ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಹೆಡ್ ಕಾನ್ಸ್ಟೇಬಲ್ ಅಬೂಬಕ್ಕರ್ ಬಲಿ

ಬಂಟ್ವಾಳ ಅಕ್ಟೋಬರ್ 15: ಬೈಕ್ ಗಳ ನಡುವೆ ನಡೆದ ಮುಖಾಮುಖಿ ಅಪಘಾತದಲ್ಲಿ ಪುಂಜಾಲಕಟ್ಟೆ ಪೋಲೀಸ್ ಠಾಣೆಯ ಹೆಡ್ ಕಾನ್ಸ್ ಟೇಬಲ್ ಅಬೂಬಕ್ಕರ್ ಮೃತಪಟ್ಟ ಘಟನೆ ಪಿಲಾತಬೆಟ್ಟು ಗ್ರಾಮದ ಮೂರ್ಜೆ ಸಮೀಪದ ನೇರಳಕಟ್ಟೆ ಎಂಬಲ್ಲಿ ನಡೆದಿದೆ.
ಅಬೂಬಕ್ಕರ್ ಅವರು ತಮ್ಮ ಠಾಣೆಯ ಇತರ ಸಿಬ್ಬಂದಿಗಳೊಂದಿಗೆ ವಾಮದಪದವಿನಲ್ಲಿ ನಡೆದ ಗೃಹ ಪ್ರವೇಶಕ್ಕೆ ತೆರಳಿದ್ದು, ಅಬೂಬಕ್ಕರ್ ಅವರು ತನ್ನ ಬೈಕಿನಲ್ಲಿ ವಾಪಸು ಆಗುತ್ತಿದ್ದರೆ ಉಳಿದವರು ಇಲಾಖಾ ಜೀಪಿನಲ್ಲಿ ಹಿಂಬಂದಿಯಿಂದ ಆಗಮಿಸುತ್ತಿದ್ದರು. ನೇರಳಕಟ್ಟೆ ಸಮೀಪ ಎರಡು ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದು ಈ ಘಟನೆ ಸಂಭವಿಸಿದೆ.

ಘಟನೆಯಿಂದ ಇನ್ನೊಂದು ಬೈಕಿನ ಸವಾರ ಇರ್ವತ್ತೂರು ನಿವಾಸಿ ದುರ್ಗಾಪ್ರಸಾದ್ ಗಂಭೀರ ಗಾಯಗೊಂಡು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂದರ್ಭದಲ್ಲಿ ಹಿಂಬದಿಯಿಂದ ಜೀಪಿನಲ್ಲಿ ಬರುತ್ತಿದ್ದ ಪೋಲೀಸ್ ಸಿಬ್ಬಂದಿ ಗಳು ಗಾಯಳುಗಳನ್ನು ತಕ್ಷಣ ಜೀಪಿನಲ್ಲಿ ಆಸ್ಪತ್ರೆಗೆ ಸಾಗಿಸಿದ್ದು ಆಬೂಬಕ್ಕರ್ ಅವರು ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.