Connect with us

    LATEST NEWS

    ಬೈಕ್ ಸ್ಕಿಡ್ ಆಗಿ ಡಿವೈಡರ್ ಗೆ ಡಿಕ್ಕಿ – ಸವಾರ ವಿಕಾಸ್ ಆಚಾರ್ಯ ಸಾವು

    ಉಡುಪಿ ಎಪ್ರಿಲ್ 23: ಬೈಕ್ ಸ್ಕಿಡ್ ಆಗಿ ಡಿವೈಡರ್‌ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೋಟ ಮಸೀದಿ ಬಳಿ ಸಂಭವಿಸಿದೆ.


    ಮೃತ ಯುವಕನನ್ನು ಕೋಟ ಮಣೂರು ನಿವಾಸಿ ವಿಕಾಸ್ ಆಚಾರ್ಯ (22) ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ 1:30 ರ ಸುಮಾರಿಗೆ ಸಾಸ್ತಾನ ದಿಂದ ಕೋಟ ಮಣೂರು ಕಡೆ ಬರುತ್ತಿದ್ದ ವೇಳೆ ಕೋಟ ಗುಜಿರಿ ಅಂಗಡಿ ಸಮೀಪ ಬೈಕ್ ನಿಯಂತ್ರಣ ತಪ್ಪಿದ ಪರಿಣಾಮ ಹೆದ್ದಾರಿಯ ಡಿವೈಡರ್ ಗೆ ಢಿಕ್ಕಿ ಹೊಡೆದು ಪಲ್ಟಿಯಾಗಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ವಿಕಾಸ್ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ‌ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    Share Information
    Advertisement
    Click to comment

    You must be logged in to post a comment Login

    Leave a Reply