Connect with us

KARNATAKA

ಬಸ್​ ಮತ್ತು ಬೈಕ್ ನಡುವೆ ಭೀಕರ ಅಪಘಾತ, ಬಸ್ ನ ಚಕ್ರದಡಿ ಸಿಲುಕಿದ ಬೈಕ್

ಕೊಡಗು, ಸೆಪ್ಟೆಂಬರ್ 04: ಬಸ್​ ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಬಸ್​ ರಸ್ತೆ ಪಕ್ಕಕ್ಕೆ ಮಗುಚಿ ಬಿದ್ದರೆ, ಬೈಕ್ ಬಸ್​ನ ಚಕ್ರದಡಿಗೆ ಸಿಲುಕಿಕೊಂಡಿದೆ. ಕೊಡಗು ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದ್ದು, ಕೆಲಕಾಲ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು.

ಮಡಿಕೇರಿ ಸಮೀಪದ ಬೋಯಿಕೇರಿಯಲ್ಲಿ ಈ ಅಪಘಾತ ಸಂಭವಿಸಿದೆ. ಮಡಿಕೇರಿಯಿಂದ ಮೈಸೂರಿಗೆ ತೆರಳುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ ಮತ್ತು ಬೈಕ್ ನಡುವೆ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ.

ಬಸ್​ನಲ್ಲಿ 21 ಮಂದಿ ಪ್ರಯಾಣಿಕರಿದ್ದು, ಅದೃಷ್ಟವಶಾತ್ ಅಷ್ಟೂ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೈಕ್​ ಬಸ್​​ನ ಚಕ್ರದಡಿಗೆ ಸಿಲುಕಿಕೊಂಡರೂ ಸವಾರ ಕೂಡ ಸಣ್ಣಪುಟ್ಟ ಗಾಯವಾಗಿದ್ದು  ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಮಡಿಕೇರಿ ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಅಪಘಾತ ನಡೆದಿದೆ.

Share Information
Continue Reading
Advertisement
Click to comment

Leave a Reply

Your email address will not be published. Required fields are marked *