Connect with us

    DAKSHINA KANNADA

    ಬೈಕ್ ಮತ್ತು ಕಾರು ನಡುವೆ ಅಪಘಾತ – ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸಾವು

    ಸುಳ್ಯ ಮೇ 23: ಬೈಕ್ ಮತ್ತು ಕಾರಿನ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಕೆ.ವಿ.ಜಿ. ಆಯುರ್ವೇದ ಕಾಲೇಜಿನ ವಿದ್ಯಾರ್ಥಿ ಸ್ಥಳದಲ್ಲೆ ಮೃತಪಟ್ಟ ಘಟನೆ ಪಾಲಡ್ಕ ಬಳಿ ನಡೆದಿದೆ.


    ಸುಳ್ಯ ಕೆವಿಜಿ ಆಯುರ್ವೇದ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂಭ್ರಮ್ ಮತ್ತು ಸ್ವರೂಪ್ ಸುಳ್ಯ ಕಡೆಯಿಂದ ಸಂಪಾಜೆ ಕಡೆಗೆ ಬೈಕ್ ನಲ್ಲಿ ತೆರಳುತ್ತಿದ್ದರು. ಪೆರಾಜೆ ಕಡೆಯಿಂದ ಸುಳ್ಯ ಕಡೆಗೆ ಕಾರು ಬರುತ್ತಿತ್ತು. ಪಾಲಡ್ಕದಲ್ಲಿ ಪರಸ್ಪರ ಗುದ್ದಿದ ಪರಿಣಾಮವಾಗಿ ಕೆವಿಜಿ ಆಯುರ್ವೇದ ಕಾಲೇಜಿನ ಮೂರನೇ ವರ್ಷದ ವಿದ್ಯಾರ್ಥಿ ಚಿಕ್ಕಬಳ್ಳಾಪುರದ ಸ್ವರೂಪ್ ಎಂಬವರು ಸ್ಥಳದಲ್ಲೇ ಮೃತಪಟ್ಟರು. ಇನ್ನೋರ್ವ ಸವಾರ ಸಂಭ್ರಮ್ ಎಂಬವರಿಗೆ ಗಾಯಗಳಾಗಿದ್ದು ಸುಳ್ಯ ಸರಕಾರಿ ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    Share Information
    Advertisement
    Click to comment

    You must be logged in to post a comment Login

    Leave a Reply