ಮಂಗಳೂರು ಡಿಸೆಂಬರ್ 26 : ಬೈಕ್ ಹಾಗೂ ಡಿಯೋ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಇಂದು ಮುಂಜಾನೆ ಚೆಂಬುಗುಡ್ಡೆಯಲ್ಲಿ ನಡೆದಿದೆ. ಮೃತ ಬೈಕ್ ಸವಾರನನ್ನು ಸಂತೋಷ್ ನಗರ ನಿವಾಸಿ ಸಂದೇಶ್ ಕೆರೆಬೈಲ್ (40) ಎಂದು ಗುರುತಿಸಲಾಗಿದೆ.

ಮುಂಜಾನೆ 3 ಗಂಟೆ ಸುಮಾರಿಗೆ ಸಂದೇಶ್ ಕೊಲ್ಯ ದೇವಸ್ಥಾನದಲ್ಲಿ ನಡೆದ ವಾರ್ಷಿಕ ಉತ್ಸವದಲ್ಲಿ ಭಾಗವಹಿಸಿ ಮನೆಗೆ ಮರಳುತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದ್ದು ತಲೆಗೆ ತೀವ್ರ ಗಾಯಗೊಂಡ ಅವರು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ.
ಮೃತರು ಅವಿವಾಹಿತರಾಗಿದ್ದು ಅವರು ಓರ್ವ ಸಹೋದರಿ ಮತ್ತು ತಾಯಿಯನ್ನು ಅಗಲಿದ್ದಾರೆ. ಅವರು ಪೇಂಟರ್ ಆಗಿ ಕಾರ್ಯ ನಿರ್ವಹಿಸುತ್ತಿದ್ದರು.