ಬೈಕ್ ಹಾಗೂ ಗ್ಯಾಸ್ ಟ್ಯಾಂಕರ್ ನಡುವೆ ಡಿಕ್ಕಿ ಬೈಕ್ ಸವಾರ ಸಾವು

ಪುತ್ತೂರು ನವೆಂಬರ್ 23: ನೆಲ್ಯಾಡಿಯಲ್ಲಿ ಬೈಕ್ ಹಾಗೂ ಟ್ಯಾಂಕರ್ ನಡುವೆ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಡೆದಿದೆ.

ಮೃತ ಬೈಕ್ ಸವಾರನನ್ನು ಜಗದೀಶ್ ಕೊಲ್ಪೆ ಎಂದು ಗುರುತಿಸಲಾಗಿದೆ. ನೆಲ್ಯಾಡಿಯ ಆರ್ಲದಲ್ಲಿ ಮಂಗಳೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಗ್ಯಾಸ್ ಟ್ಯಾಂಕರ್ ಹಾಗೂ ಬೈಕ್ ಸವಾರ ತಿರುವು ರಸ್ತೆಯಿಂದ ಪ್ರಮುಖ ರಸ್ತೆಗೆ ಬರುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ.

ಬೈಕ್ ಗೆ ಢಿಕ್ಕಿ ಬಳಿಕ ರಸ್ತೆ ಮೇಲೆ ಗ್ಯಾಸ್ ಟ್ಯಾಂಕರ್ ಬಿದ್ದಿದೆ. ಆದರೆ ಗ್ಯಾಸ್ ಸೋರಿಕೆ ಆಗದ ಕಾರಣ ಯಾವುದೇ ಹೆಚ್ಚಿನ ಅಪಾಯವಾಗಿಲ್ಲ. ಮುನ್ನೆಚ್ಚರಿಕಾ ಕ್ರಮವಾಗಿ ರಸ್ತೆಯ ಇಬ್ಬಾಗಗಳಲ್ಲಿ ಪೊಲೀಸರು ಬ್ಯಾರಿಕೇಟ್ ಹಾಕಿದ್ದು, ಸ್ಥಳಕ್ಕೆ ಅಗ್ನಿಶಾಮಕದಳ ದಾವಿಸಿದ್ದು, ಪರಿಸ್ಥಿತಿ ನಿಯಂತ್ರಣದಲ್ಲಿದೆ. ಕ್ರೇನ್ ಮೂಲಕ ಟ್ಯಾಂಕರ್ ಮೇಲೆತ್ತಲು ವ್ಯವಸ್ಥೆ ಮಾಡಲಾಗಿದೆ.

Facebook Comments

comments