Connect with us

    BANTWAL

    ಬೈಕ್ ಗೆ ಡಿಕ್ಕಿ ಹೊಡೆದ ಟಿಪ್ಪರ್ ಲಾರಿ – ಬೈಕ್ ಸವಾರರಿಗೆ ಗಂಭೀರ ಗಾಯ

    ಬಂಟ್ವಾಳ ಸೆಪ್ಟೆಂಬರ್ 02: ಟಿಪ್ಪರ್ ಲಾರಿಯೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರಿಬ್ಬರು ಗಂಭೀರ ಗಾಯಗೊಂಡ ಘಟನೆ ಬಿ.ಸಿ.ರೋಡ್ ತಲಪಾಡಿಯಲ್ಲಿ ನಡೆದಿದೆ.


    ಗಂಭೀರ ಗಾಯಗೊಂಡ ಬೈಕ್ ಸವಾರರನ್ನು ಫರಂಗಿಪೇಟೆಯ ಅಮ್ಮೆಮಾರ್ ನಿವಾಸಿಗಳು ಎಂದು ತಿಳಿದು ಬಂದಿದೆ.


    ಬೈಕ್ ಸವಾರರಿಬ್ಬರು ಫರಂಗಿಪೇಟೆಯಿಂದ ಬಿ.ಸಿ.ರೋಡ್ ಕಡೆಗೆ ತೆರಳಿದ್ದು, ತಲಪಾಡಿ ಎಂಬಲ್ಲಿ ಟಿಪ್ಪರ್ ಲಾರಿಯೊಂದು ಢಿಕ್ಕಿ ಹೊಡೆದು, ಈ ಅಪಘಾತ ಸಂಭವಿಸಿದೆ. ಘಟನೆಯ ತೀವ್ರತೆಗೆ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸುತ್ತಿದ್ದಾರೆ. ಘಟನೆಯಿಂದ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಕಾಲ ಇತರ ವಾಹನಗಳ ಸಂಚಾರಕ್ಕೆ ಅಡಚಣೆ ಉಂಟಾಯಿತು.

    Share Information
    Advertisement
    Click to comment

    You must be logged in to post a comment Login

    Leave a Reply