DAKSHINA KANNADA
ಡಿವೈಡರ್ಗೆ ಡಿಕ್ಕಿ ಹೊಡೆದ ಬೈಕ್; ನವವಿವಾಹಿತ ಸಾವು
ಉಪ್ಪಿನಂಗಡಿ, ಜನವರಿ 27: ಡಿವೈಡರ್ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ನವವಿವಾಹಿತ ಸವಾರ ಮೃತಪಟ್ಟ ದುರ್ಘಟನೆ ಮಂಗಳೂರು–ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಉಪ್ಪಿನಂಗಡಿ ಜಂಕ್ಷನ್ ಬಳಿ ಮಂಗಳವಾರ ತಡರಾತ್ರಿ ಸಂಭವಿಸಿದೆ.
ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಕಲ್ಲೇರಿ ನಿವಾಸಿ ಕಿಶೋರ್(29) ಮೃತಪಟ್ಟ ಯುವಕ. ಈತನಿಗೆ ತಿಂಗಳ ಹಿಂದೆಯಷ್ಟೇ ವಿವಾಹವಾಗಿತ್ತು. ಮೃತರು ತಾಯಿ, ಪತ್ನಿ ಮತ್ತು ಇಬ್ಬರು ಸಹೋದರಿಯರನ್ನು ಅಗಲಿದ್ದಾರೆ.
ಮಂಗಳೂರಿನಲ್ಲಿ ಉದ್ಯೋಗದಲ್ಲಿದ್ದ ಕಿಶೋರ್ ರಾತ್ರಿ ಕೆಲಸ ಮುಗಿಸಿ ವಾಪಸ್ ಮನೆಗೆ ಬರುತ್ತಿದ್ದ ವೇಳೆ ಅಪಘಾತ ನಡೆದಿದೆ. ನಿಯಂತ್ರಣ ಕಳೆದುಕೊಂಡ ಬೈಕ್ ಡಿವೈಡರ್ಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಕಿಶೋರ್ನನ್ನು ಸ್ಥಳೀಯರು ಕೂಡಲೇ ಪುತ್ತೂರಿನ ಆಸ್ಪತ್ರೆಗೆ ದಾಖಲಿಸಲು ಕರೆದುಕೊಂಡು ಹೋದರಾದರೂ ದಾರಿ ಮಧ್ಯೆ ಕೊನೆಯುಸಿರುಳೆದಿದ್ದಾರೆ.
Facebook Comments
You may like
ಮದುವೆ ಸಂಭ್ರಮ ಮಗಿಯುವ ಮೊದಲೆ ಹೃದಯಾಘಾತಕ್ಕೆ ಬಲಿಯಾದ ನವವಧು
ಶೂಟಿಂಗ್ ವೇಳೆ ಪೆಟ್ರೋಲ್ ಬಾಂಬ್ ಸಿಡಿದು ನಟ ರಿಷಬ್ ಶೆಟ್ಟಿಗೆ ಗಾಯ
ಕಾಡಾನೆ ಜೊತೆ ಸೆಲ್ಫಿ ತೆಗೆದುಕೊಳ್ಳಲು ಹೋದಾ ಯುವಕ ಅಪ್ಪಚ್ಚಿ!
ಕೋಟ – ಬೈಕ್ ಗೆ ಕಾರು ಡಿಕ್ಕಿ ಸವಾರ ಸ್ಥಳದಲ್ಲೇ ಸಾವು
ಧರ್ಮಸ್ಥಳದ ಬಾಹುಬಲಿ ಬೆಟ್ಟದ ಕಾಡಿನಲ್ಲಿ ಅಪರಿಚಿತ ವ್ಯಕ್ತಿಯ ಮೃತದೇಹ ಪತ್ತೆ
ನೆಲ್ಯಾಡಿಯಲ್ಲಿ ಗ್ಯಾಸ್ ಮತ್ತು ಡೀಸೆಲ್ ಟ್ಯಾಂಕರ್ ಅಪಘಾತ : ತಪ್ಪಿದ ಭಾರಿ ದುರಂತ
You must be logged in to post a comment Login