ಬೈಕ್ -ಪಿಕಪ್ ಢಿಕ್ಕಿ: ಬೈಕ್ ಸವಾರ ಧಾರುಣ ಸಾವು

ಪುತ್ತೂರು, ಫೆಬ್ರವರಿ 03 :ಬೈಕ್ ಹಾಗೂ ಪಿಕಪ್ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಭಾನುವಾರ ರಾತ್ರಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರಿನಲ್ಲಿ ಸಂಭವಿಸಿದೆ.

ಮೃತ ಸವಾರನನ್ನು ಆಲಂಕಾರು ಸಮೀಪದ ಕೃಷ್ಣಪ್ಪ ಗೌಡ ಎಂಬವರ ಪುತ್ರ ದಿನೇಶ(30) ಎಂದು ಗುರುತಿಸಲಾಗಿದೆ.

ಕಡಬದಿಂದ ಆಲಂಕಾರು ಕಡೆಗೆ ತೆರಳುತ್ತಿದ್ದ ಪಿಕಪ್ ಹಾಗೂ ಕಡಬ ಕಡೆಗೆ ಆಗಮಿಸುತ್ತಿದ್ದ ಬೈಕ್‌ ನಡುವೆ ಕುಂತೂರು ಸಮೀಪದ ಅನ್ನಡ್ಕ ಎಂಬಲ್ಲಿ ಮುಖಾಮುಖಿ ಢಿಕ್ಕಿಯಾಗಿದೆ. ಪರಿಣಾಮ ಬೈಕ್ ಸವಾರ ದಿನೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸ್ಥಳಕ್ಕೆ ಕಡಬ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹವನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರದಲ್ಲಿರಿಸಲಾಗಿದೆ.

2 Shares

Facebook Comments

comments