LATEST NEWS
ಪಾಣೆಮಂಗಳೂರು ಸೇತುವೆ ಬಳಿ ಬೈಕ್ ಇಟ್ಟು ಸವಾರ ನಾಪತ್ತೆ

ಬಂಟ್ವಾಳ ಜುಲೈ 29: ಪಾಣೆಮಂಗಳೂರು ಹೊಸ ಸೇತುವೆ ಸಮೀಪ ಮಧ್ಯರಾತ್ರಿ ಬೈಕ್ ಚಾಲನೆಯಲ್ಲಿಟ್ಟು ಸವಾರ ನಾಪತ್ತೆಯಾಗಿರುವ ಘಟನೆ ನಡೆದಿದೆ. ನಾಪತ್ತೆಯಾಗಿರು ಬೈಕ್ ಸವಾರನಿಗಾಗಿ ಶೋಧ ಕಾರ್ಯ ಮುಂದುವರೆದಿದೆ.
ನಾಪತ್ತೆಯಾಗಿರುವ ಬೈಕ್ ಸವಾರನನ್ನು ಮೂಲತ: ಬೆಂಗಳೂರು ದಾಸರಹಳ್ಳಿ ನಿವಾಸಿ ಸತ್ಯವೇಲು (29) ಎಂದು ಹೇಳಲಾಗಿದ್ದು, ಬೆಂಗಳೂರಿನ ಖಾಸಗಿ ಕಂಪೆನಿಯೊಂದರಲ್ಲಿ ಕೆಲಸದಲ್ಲಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಈತ 15 ದಿನಗಳ ಹಿಂದೆ ಆತ್ಮಹತ್ಯೆ ಮಾಡಿಕೊಳ್ಳಲು ಬೆಂಗಳೂರಿನಿಂದ ಪಾಣೆಮಂಗಳೂರಿಗೆ ಆಗಮಿಸಿದ್ದ. ಆದರೆ ಸ್ಥಳೀಯರು ಆತನನ್ನು ರಕ್ಷಿಸಿ ಬಳಿಕ ಬಂಟ್ವಾಳ ನಗರ ಪೊಲೀಸರು ಆತನ ಪೋಷಕರನ್ನು ಕರೆಸಿ ಕಳುಹಿಸಿಕೊಟ್ಟಿದ್ದರು.
ಆತನ ಬೈಕ್ ಬುಧವಾರ ಮುಂಜಾನೆ 4.30ರ ಸುಮಾರಿಗೆ ಮತ್ತೆಪಾಣೆಮಂಗಳೂರು ಸೇತುವೆಯ ಮೇಲೆ ಕಂಡುಬಂದಿದ್ದು, ಈ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಆತನ ನಾಪತ್ತೆಯ ಕುರಿತು ಬೆಂಗಳೂರಿನ ಸ್ಥಳೀಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ಬಂಟ್ವಾಳ ನಗರ ಪೊಲೀಸರು ತಿಳಿಸಿದ್ದಾರೆ.