KARNATAKA
ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಬೈಕ್ ಸವಾರರಿಂದ ಹಲ್ಲೆ
ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಬೈಕ್ ಸವಾರರಿಂದ ಹಲ್ಲೆ
ಮಂಗಳೂರು ಜೂನ್ 21: ಕರ್ತವ್ಯ ನಿರತ ಟ್ರಾಫಿಕ್ ಪೊಲೀಸ್ ಸಿಬ್ಬಂದಿಗೆ ಬೈಕ್ ಸವಾರರು ಹಲ್ಲೆ ನಡೆಸಿ ಪರಾರಿಯಾದ ಘಟನೆ ಉಳ್ಳಾಲದ ತೊಕ್ಕೊಟ್ಟುವಿನಲ್ಲಿ ನಡೆದಿದೆ.
ನಂಬರ್ ಪ್ಲೇಟ್ ರಹಿತ ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸದೇ ಸಂಚರಿಸುತ್ತಿದ್ದ ಸವಾರರನ್ನು ತಡೆಯಲು ಮುಂದಾದ ಸಂದರ್ಭ ಈ ಘಟನೆ ನಡೆದಿದೆ.
ಹೆಲ್ಮೆಟ್ ಇಲ್ಲದೆ ಸಂಚರಿಸುತ್ತಿದ್ದ ಇಬ್ಬರು ಸವಾರರನ್ನು ಕರ್ತವ್ಯದಲ್ಲಿದ್ದ ಸಂಚಾರಿ ಪೊಲೀಸ್ ಸಿಬಂದಿ ತಡೆದು ಕ್ರಮಕ್ಕೆ ಮುಂದಾದಾಗ ಬೈಕಿನಲ್ಲಿದ್ದ ಸವಾರ ನಿಲ್ಲಿಸದೇ ಮುಂದಕ್ಕೆ ಚಲಾಯಿಸಿದ್ದಾರೆ. ಈ ಸಂದರ್ಭದಲ್ಲಿ ಬೈಕ್ ತಡೆಯಲು ಮುಂದಾದ ಪೊಲೀಸ್ ಸಿಬ್ಬಂದಿಗೆ ಬೈಕ್ ನಲ್ಲಿದ್ದ ಸವಾರರು ಕೆನ್ನೆಗೆ ಹೊಡೆದ ಹಲ್ಲೆ ನಡೆಸಿ ಬೈಕ್ ಸಮೇತ ಪರಾರಿಯಾಗಿದ್ದಾರೆ.
ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ್ದ ಬೈಕ್ ಸವಾರರನ್ನು ಬಂಧಿಸಲಾಗಿದ್ದು, ಬಂಧಿತ ಆರೋಪಿಯನ್ನು ಮದನಿ ನಗರ ನಿವಾಸಿ ಅಝರ್ ಎಂದು ಗುರುತಿಸಲಾಗಿದೆ.