ಚಾಮರಾಜನಗರದ ಅಯ್ಯನಪುರ ಗ್ರಾಮದ ನಿವಾಸಿಗಳಾದ ನಾಗೇಂದ್ರ (48) ಮತ್ತು ಮಲ್ಲೇಶ್ (40) ಮೃತ ದುರ್ದೈವಿಗಳು. ಬುಧವಾರ ರಾತ್ರಿ ಇವರು ದ್ವಿಚಕ್ರ ವಾಹನದಲ್ಲಿ ಅಯ್ಯನಪುರ-ಹಿತ್ತಲಗುಡ್ಡೆ ರಸ್ತೆಯಲ್ಲಿ ತೆರಳುತ್ತಿದ್ದಾಗ, ಭಾರಿ ಮಳೆಯ ಕಾರಣ ವಿದ್ಯುತ್ ಕಂಬದ ಕೆಳಭಾಗದಲ್ಲಿ ಜೋತುಕೊಂಡಿದ್ದ ತಂತಿ ತಗುಲಿ ಇಬ್ಬರು ಸ್ಥಳದಲ್ಲೆ ಮೃತಪಟ್ಟಿರುತ್ತಾರೆ. ಸ್ಥಳಕ್ಕೆ ಪೂರ್ವ ಪೊಲೀಸ್ ಠಾಣೆ ಪೊಲೀಸರು ಭೇಟಿ ನೀಡಿದ್ದು , ಪ್ರಕರಣ ದಾಖಲು ಮಾಡಿದ್ದಾರೆ. ಸೂಕ್ತ ಪರಿಹಾರ ನೀಡುವಂತೆ ಚೆಸ್ಕಾಂ ನ್ನು ಮೃತರ ಸಂಬಂಧಿಕರು ಆಗ್ರಹಿಸಿದ್ದಾರೆ.
You must be logged in to post a comment Login