LATEST NEWS
ಉಳ್ಳಾಲ – ಬೈಕ್ ಸ್ಕಿಡ್ ಆಗಿ ಬಿದ್ದು ಸವಾರ ಸಾವು

ಮಂಗಳೂರು ಮೇ 24: ಬೈಕ್ ಸ್ಕಿಡ್ ಆಗಿ ಬಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ಸವಾರ ಚಿಕಿತ್ಸೆ ಫಲಕಾರಿಯಾಗದೇ ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕೊಲ್ಯ ಎಂಬಲ್ಲಿ ಶುಕ್ರವಾರ ರಾತ್ರಿ ನಡೆದಿದೆ.
ಮೃತರನ್ನು ಸೋಮೇಶ್ವರ ಗ್ರಾಮದ ಪಿಲಾರು ಅಂಬಿಸಾದಿ ನಿವಾಸಿ ಮನೋಜ್ ಗಟ್ಟಿ ಎಂದು ಗುರುತಿಸಲಾಗಿದೆ. ಇಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದ ಮನೋಜ್ ಶುಕ್ರವಾರ ರಾತ್ರಿ ಕೋಟೆಕಾರಿನ ಕೊಂಡಾಣ ಕ್ಷೇತ್ರದ ಕಡೆಯ ಬಂಡಿ ಉತ್ಸವಕ್ಕೆ ತನ್ನ ಬೈಕಲ್ಲಿ ತೆರಳಿದ್ದರು. ರಾತ್ರಿ ವೇಳೆ ವಾಪಸ್ ಆಗುತ್ತಿದ್ದಾಗ ಕೊಲ್ಯದಲ್ಲಿ ಬೈಕ್ ಸ್ಕಿಡ್ ಆಗಿ ಬಿದ್ದಿದೆ. ಇದರಿಂದ ರಸ್ತೆಗೆಸೆಯಲ್ಪಟ್ಟ ಮನೋಜ್ ಅವರು ಗಂಭೀರ ಗಾಯಗೊಂಡಿದ್ದು ಅವರನ್ನು ಸ್ಥಳೀಯರು ತಕ್ಷಣವೇ ದೇರಳಕಟ್ಟೆಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾರೆ.
